Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:12 - ಪರಿಶುದ್ದ ಬೈಬಲ್‌

12 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನಲ್ಲಿ ನಂಬಿಕೆ ಇಡುವ ವ್ಯಕ್ತಿಯು ನಾನು ಮಾಡಿದ ಕಾರ್ಯಗಳನ್ನೇ ಮಾಡುವನು. ಹೌದು ನಾನು ಮಾಡುವ ಕಾರ್ಯಗಳಿಗಿಂತಲೂ ದೊಡ್ಡಕಾರ್ಯಗಳನ್ನು ಅವನು ಮಾಡುವನು. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಾನು ಮಾಡುವ ಕ್ರಿಯೆಗಳನ್ನು ತಾವು ಸಹ ಮಾಡುವರು. ಇವುಗಳಿಗಿಂತ ಮಹತ್ತಾದವುಗಳನ್ನು ಅವರು ಮಾಡುವರು. ಏಕೆಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಿಯಾ ತುಮ್ಕಾ ಖರೆ ಹೊತ್ತೆ ಸಾಂಗುಕ್ ಲಾಗ್ಲಾ, ಜೆ ಕೊನ್ ಮಾಜೆ ವರ್ತಿ ವಿಶ್ವಾಸ್ ಕರ್‍ತಾತ್ ತೆನಿ ಮಿಯಾ ಕರಲ್ಲಿ ಕಾಮಾ ಕರ್‍ತಾತ್, ತೆನಿ ತ್ಯೆಚೆನ್ಬಿ ಮೊಟಿ ಕಾಮಾ ಕರ್‍ತಾತ್, ಕಶ್ಯಾಕ್ ಮಟ್ಲ್ಯಾರ್ ಮಿಯಾ ಬಾಬಾಕ್ಡೆ ಜಾವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:12
28 ತಿಳಿವುಗಳ ಹೋಲಿಕೆ  

ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಸಂಶಯಪಡದೆ ನಂಬಿದರೆ ನಾನು ಈ ಮರಕ್ಕೆ ಮಾಡಿದಂತೆ ನೀವೂ ಮಾಡಲು ಸಾಧ್ಯ. ಅಲ್ಲದೆ ಇನ್ನೂ ಹೆಚ್ಚಾಗಿ ಮಾಡಲು ಸಾಧ್ಯ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಪೂರ್ಣ ನಂಬಿಕೆಯಿಂದ ಹೇಳಿದರೆ ಅಂತೆಯೇ ಸಂಭವಿಸುವುದು.


ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು.


ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆ ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಆ ಕೂಡಲೇ ಆ ಆತ್ಮವು ಹೊರಬಂದಿತು.


ಪೇತ್ರನು ಅವನಿಗೆ, “ಐನೇಯಾ, ಯೇಸು ಕ್ರಿಸ್ತನು ನಿನ್ನನ್ನು ಗುಣಪಡಿಸುತ್ತಾನೆ. ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು!” ಎಂದು ಹೇಳಿದನು. ಆ ಕೂಡಲೇ ಐನೇಯನು ಎದ್ದುನಿಂತನು.


ಪೌಲನ ಕರವಸ್ತ್ರಗಳನ್ನು ಮತ್ತು ಬಟ್ಟೆಗಳನ್ನು ಕೆಲವರು ತೆಗೆದುಕೊಂಡು ಹೋಗಿ ರೋಗಿಗಳ ಮೇಲೆ ಹಾಕುತ್ತಿದ್ದರು. ಆ ಕೂಡಲೇ ರೋಗಿಗಳು ಗುಣಹೊಂದುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ದೆವ್ವಗಳು ಬಿಟ್ಟುಹೋಗುತ್ತಿದ್ದವು.


ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು.


ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.


ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.


ಆದರೆ ಪೇತ್ರ ಮತ್ತು ಯೋಹಾನರ ಬೋಧನೆಯನ್ನು ಕೇಳಿ ಅನೇಕರು ನಂಬಿಕೊಂಡರು. ಆಗ ಆ ಸಮುದಾಯದಲ್ಲಿ ವಿಶ್ವಾಸಿಗಳ ಸಂಖ್ಯೆ ಐದು ಸಾವಿರಕ್ಕೆ ಏರಿತ್ತು.


ಆದರೆ ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನಾನು ಹೋಗುವುದು ನಿಮ್ಮ ಒಳ್ಳೆಯದಕ್ಕಾಗಿಯೇ ಏಕೆಂದರೆ ನಾನು ಹೋಗಿ ಸಹಾಯಕನನ್ನು ನಿಮ್ಮ ಬಳಿಗೆ ಕಳುಹಿಸುವೆನು. ನಾನು ಹೋಗದಿದ್ದರೆ, ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ.


ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ.


ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.


ಆಗ ಯೇಸು, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿರುತ್ತೇನೆ. ಬಳಿಕ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತೇನೆ.


ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.


ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.


“ಇವರಿಗೆ ನಾವೇನು ಮಾಡೋಣ? ಇವರು ದೊಡ್ಡ ಅದ್ಭುತಕಾರ್ಯ ಮಾಡಿರುವುದು ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಅದ್ಭುತಕಾರ್ಯವು ಸ್ಪಷ್ಟವಾಗಿರುವುದರಿಂದ ಅದನ್ನು ಅಸತ್ಯವೆಂದು ಹೇಳಲಾಗದು.


‘ನಾನು ಹೊರಟುಹೋಗುತ್ತೇನೆ. ಆದರೆ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇನೆ’ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ತಂದೆಯ ಬಳಿಗೆ ಮರಳಿಹೋಗುವುದರ ಬಗ್ಗೆ ಸಂತೋಷಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.


ಅವರು ಬೇರಬೇರೆ ಭಾಷೆಗಳನ್ನು ಮಾತಾಡುತ್ತಾ ದೇವರಿಗೆ ಸ್ತೋತ್ರ ಸಲ್ಲಿಸುತ್ತಿರುವುದನ್ನು ಆ ಯೆಹೂದ್ಯ ವಿಶ್ವಾಸಿಗಳು ಕೇಳಿದರು. ಬಳಿಕ ಪೇತ್ರನು,


ಪ್ರಭುವಾದ ಯೇಸು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ಅಪೊಸ್ತಲರು ಬಹುಬಲವಾಗಿ ಜನರಿಗೆ ಹೇಳುತ್ತಿದ್ದರು. ದೇವರು ವಿಶ್ವಾಸಿಗಳೆಲ್ಲರನ್ನು ಬಹಳವಾಗಿ ಆಶೀರ್ವದಿಸಿದನು.


ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಆ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಆ ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ.


‘ಒಬ್ಬನು ಬಿತ್ತುತ್ತಾನೆ, ಆದರೆ ಮತ್ತೊಬ್ಬನು ಬೆಳೆಯನ್ನು ಕೊಯ್ಯುತ್ತಾನೆ’ ಎಂದು ನಾವು ಹೇಳುವ ನಾಣ್ಣುಡಿ ಸತ್ಯವಾದದ್ದು.


ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು