Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:16 - ಪರಿಶುದ್ದ ಬೈಬಲ್‌

16 ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ಆತನು ಬೇರೊಬ್ಬ ಸಹಾಯಕನನ್ನು ನಿಮಗೆ ಕೊಡುವನು. ಆ ಸಹಾಯಕನು ಸದಾಕಾಲ ನಿಮ್ಮೊಂದಿಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು; ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ಮಾಜ್ಯಾ ಬಾಬಾಕ್ಡೆ ಇಚಾರುನ್ ಎಕ್ ಮಜತ್ ಕರ್‍ತಲ್ಯಾಕ್ ಧಾಡುನ್ ದಿತಾ, ತೊ ಸದಾ ಸರ್ವತಾ ತುಮ್ಚ್ಯಾ ವಾಂಗ್ಡಾಚ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:16
31 ತಿಳಿವುಗಳ ಹೋಲಿಕೆ  

ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.


“ನಾನು ತಂದೆಯ ಬಳಿಯಿಂದ ಸಹಾಯಕನನ್ನು ನಿಮಗೆ ಕಳುಹಿಸಿಕೊಡುವೆನು. ತಂದೆಯ ಬಳಿಯಿಂದ ಬರುವ ಆ ಸಹಾಯಕನು ಸತ್ಯದ ಆತ್ಮನಾಗಿದ್ದಾನೆ. ಆತನು ಬಂದಾಗ ನನ್ನ ಬಗ್ಗೆ ನಿಮಗೆ ತಿಳಿಸುವನು.


ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರಸೂಸುವುದು.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.


ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಗಳನ್ನು ಮಾಡದಿರಲೆಂದು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಆದರೆ ಯಾರಾದರೂ ಪಾಪವನ್ನು ಮಾಡಿದರೆ ನಮಗೆ ಸಹಾಯ ಮಾಡಲು ಯೇಸು ಕ್ರಿಸ್ತನಿದ್ದಾನೆ. ನೀತಿವಂತನಾಗಿರುವ ಆತನು ತಂದೆಯಾದ ದೇವರ ಬಳಿಯಲ್ಲಿದ್ದಾನೆ.


ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ನಿಮ್ಮಲ್ಲಿ ಕ್ರಿಸ್ತನಿಂದಾದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯ ದಯಾರಸಗಳು ಇವೆಯೋ?


ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.


ಆದರೆ ಯೇಸುವಿನ ಶಿಷ್ಯರು ಸಂತೋಷವಾಗಿದ್ದರು ಮತ್ತು ಪವಿತ್ರಾತ್ಮಭರಿತರಾಗಿದ್ದರು.


“ನೀನು ಇವರನ್ನು ಈ ಲೋಕದಿಂದ ತೆಗೆದುಕೊಳ್ಳಬೇಕೆಂದು ನಾನು ಕೇಳುತ್ತಿಲ್ಲ. ಆದರೆ ಇವರನ್ನು ಕೆಡುಕನಿಂದ (ಸೈತಾನನಿಂದ) ತಪ್ಪಿಸಿ ಸುರಕ್ಷಿತವಾಗಿರಿಸಬೇಕೆಂದು ನಾನು ಕೇಳಿಕೊಳ್ಳುತ್ತಿದ್ದೇನೆ.


“ನಾನು ನಿಮ್ಮನ್ನು ತಂದೆತಾಯಿಗಳಿಲ್ಲದ ಮಕ್ಕಳಂತೆ ಒಬ್ಬಂಟಿಗರನ್ನಾಗಿ ಬಿಟ್ಟುಹೋಗುವುದಿಲ್ಲ. ನಾನು ನಿಮ್ಮ ಬಳಿಗೆ ಬರುತ್ತೇನೆ.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.


ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ಅದನ್ನು ನೆರವೇರಿಸುವೆನು.


“ನಾನು ಇವರಿಗಾಗಿಯೂ ಇವರ ವಾಕ್ಯದಿಂದ ನನ್ನಲ್ಲಿ ನಂಬಿಕೆ ಇಡುವ ಎಲ್ಲರಿಗಾಗಿಯೂ ಪ್ರಾರ್ಥಿಸುತ್ತಿದ್ದೇನೆ.


ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.


ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು.


ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.


ಒಮ್ಮೆ, ಯೇಸು ಅವರೊಂದಿಗೆ ಊಟ ಮಾಡುತ್ತಿದ್ದಾಗ, ಜೆರುಸಲೇಮನ್ನು ಬಿಟ್ಟುಹೋಗಬಾರದೆಂದು ಅವರಿಗೆ ಹೇಳಿದನು. “ತಂದೆಯು ನಿಮಗೊಂದು ವಾಗ್ದಾನವನ್ನು ಮಾಡಿದ್ದಾನೆ. ನಾನು ಮೊದಲೇ ಅದರ ಬಗ್ಗೆ ನಿಮಗೆ ತಿಳಿಸಿದ್ದೇನೆ. ಈ ವಾಗ್ದಾನವನ್ನು ಸ್ವೀಕರಿಸಿಕೊಳ್ಳಲು ಜೆರುಸಲೇಮಿನಲ್ಲಿ ಕಾದುಕೊಂಡಿರಿ.


ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ನಮ್ಮಲ್ಲಿ ನೆಲೆಗೊಂಡಿರುವ ಸತ್ಯದ ನಿಮಿತ್ತ ನಾವು ನಿಮ್ಮನ್ನು ಪ್ರೀತಿಸುತ್ತೇವೆ. ಈ ಸತ್ಯವು ನಮ್ಮಲ್ಲಿ ಸದಾಕಾಲ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು