ಯೋಹಾನ 14:17 - ಪರಿಶುದ್ದ ಬೈಬಲ್17 ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ, ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತೊ ಎಕ್ ಆತ್ಮೊ ತೊ ದೆವಾಚ್ಯಾ ವಿಶಯಾತ್ ಖರೆ ದಾಕ್ವುನ್ ದಿತಾ. ಹ್ಯೊ ಜಗ್ ತೆಕಾ ಸ್ವಿಕಾರ್ ಕರಿನಾ, ಕಶ್ಯಾಕ್ ಮಟ್ಲ್ಯಾರ್ ಹ್ಯೊ ಜಗ್ ತೆಕಾ ವಳ್ಕಿನಾ, ತೊ ತೆಕಾ ದಿಸಿನಾ. ಖರೆ ತುಮಿ ತೆಕಾ ವಳಕ್ತ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತೊ ತುಮ್ಚ್ಯಾ ವಾಂಗ್ಡಾ ಜಿವನ್ ಕರ್‍ತಾ ಅನಿ ತುಮ್ಚ್ಯಾ ಭುತ್ತುರ್ ರ್‍ಹಾತಾ. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.