Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:19 - ಪರಿಶುದ್ದ ಬೈಬಲ್‌

19 ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ಎಕ್ ಉಲ್ಲ್ಯಾಶ್ಯಾ ಎಳಾನ್ ಹ್ಯೊ ಜಗ್ ಮಾಕಾ ಬಗಿನಾ. ಖರೆ ತುಮಿ ಮಾಕಾ ಬಗ್ತ್ಯಾಶಿ. ಕಶ್ಯಾಕ್ ಮಟ್ಲ್ಯಾರ್ ಮಿಯಾ ಝಿತ್ತೊ ರ್‍ಹಾತಾ ಅನಿ ತುಮಿಬಿ ಝಿತ್ತೆ ರ್‍ಹಾತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:19
20 ತಿಳಿವುಗಳ ಹೋಲಿಕೆ  

“ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ಮತ್ತೆ ನೋಡುವಿರಿ.”


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ಆಗ ಯೇಸು, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿರುತ್ತೇನೆ. ಬಳಿಕ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತೇನೆ.


ಯೇಸು ಆಕೆಗೆ, “ನಾನೇ ಪುನರುತ್ಥಾನ. ನಾನೇ ಜೀವ. ನನ್ನನ್ನು ನಂಬುವವನು ತಾನು ಸತ್ತನಂತರವೂ ಮತ್ತೆ ಜೀವವನ್ನು ಹೊಂದುವನು.


“ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು.


ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.


ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.


ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ.


ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ಯೇಸು, “ನನ್ನ ಮಕ್ಕಳೇ, ಇನ್ನು ಸ್ವಲ್ಪ ಸಮಯ ಮಾತ್ರ ನಾನು ನಿಮ್ಮೊಂದಿಗೆ ಇರುತ್ತೇನೆ. ನೀವು ನನಗಾಗಿ ಹುಡುಕುವಿರಿ. ನಾನು ಯೆಹೂದ್ಯರಿಗೆ ಹೇಳಿದ್ದನ್ನು ನಿಮಗೂ ಹೇಳುತ್ತೇನೆ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ.


ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.


ಯೇಸು ಅವರಿಗೆ, “ನಾನು ನಿಮ್ಮನ್ನು ಬಿಟ್ಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ. ಆದರೆ ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.


ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.


ಆದರೆ ಯೇಸುವು ಎಲ್ಲಾ ಜನರಿಗೆ ಕಾಣಿಸಿಕೊಳ್ಳಲಿಲ್ಲ. ದೇವರಿಂದ ಮೊದಲೇ ಸಾಕ್ಷಿಗಳಾಗಿ ಆಯ್ಕೆಗೊಂಡಿದ್ದವರು ಮಾತ್ರ ಆತನನ್ನು ಕಂಡರು! ನಾವೇ ಆ ಸಾಕ್ಷಿಗಳು! ಯೇಸು ಜೀವಂತವಾಗಿ ಎದ್ದುಬಂದ ಮೇಲೆ ನಾವು ಆತನೊಂದಿಗೆ ಊಟ ಮಾಡಿದೆವು ಮತ್ತು ಪಾನ ಮಾಡಿದೆವು.


ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು