ಯೋಹಾನ 14:2 - ಪರಿಶುದ್ದ ಬೈಬಲ್2 ನನ್ನ ತಂದೆಯ ಮನೆಯಲ್ಲಿ ಅನೇಕ ಕೋಣೆಗಳಿವೆ. ಅದು ಸತ್ಯವಲ್ಲದಿದ್ದರೆ, ನಾನು ನಿಮಗೆ ಹೇಳುತ್ತಿರಲಿಲ್ಲ. ನಾನು ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಲು ಅಲ್ಲಿಗೆ ಹೋಗುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನ್ನ ತಂದೆಯ ಮನೆಯಲ್ಲಿ ಬಹಳ ಬಿಡಾರಗಳು ಅವೆ; ಇಲ್ಲದಿದ್ದರೆ ನಿಮಗೆ ಹೇಳುತ್ತಿದ್ದೆನು; ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗುತ್ತೇನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ. ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 “ಮಾಜ್ಯಾ ಬಾಬಾಚ್ಯಾ ಘರಾತ್ ಲೈ ಖೊಲಿಯಾ ಹಾತ್, ಅನಿ ಮಿಯಾ ತುಮ್ಚ್ಯಾಸಾಟ್ನಿ ಜಾಗೊ ತಯಾರ್ ಕರುಕ್ ಮನುನ್ ಜಾವ್ಕ್ ಲಾಗ್ಲಾ, ನಾಹೊಲ್ಯಾರ್ ಹೆ ಸಗ್ಳೆ ಮಿಯಾ ಸಾಂಗಿನಸಿ ಹೊತ್ತೊ. ಅಧ್ಯಾಯವನ್ನು ನೋಡಿ |
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.