ಯೋಹಾನ 14:21 - ಪರಿಶುದ್ದ ಬೈಬಲ್21 ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಜೆ ಕೊನ್ ಮಿಯಾ ದಿಲ್ಲೆ ಖಾಯ್ದೆ ಮಾನುನ್ ಘೆತಾ ಅನಿ ತೆಂಚ್ಯಾ ಸರ್ಕೆ ಚಲ್ತಾ ತೊ ಮಾಜೊ ಪ್ರೆಮ್ ಕರ್‍ತಾ. ಜೆ ಕೊನ್ ಮಾಜೊ ಪ್ರೆಮ್ ಕರ್‍ತಾ ತೆಂಚೊ ಮಾಜೊ ಬಾಬಾ ಪ್ರೆಮ್ ಕರ್‍ತಾ, ಮಿಯಾಬಿ ತೆಂಚೊ ಪ್ರೆಮ್ ಕರ್‍ತಾ ಅನಿ ಮಾಕಾಚ್ ಮಿಯಾ ತೆಂಕಾ ದಾಕ್ವುನ್ ದಿತಾ ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.
ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.