ಯೋಹಾನ 14:22 - ಪರಿಶುದ್ದ ಬೈಬಲ್22 ಆಗ ಯೂದನು (ಇಸ್ಕರಿಯೋತ ಯೂದನಲ್ಲ), “ಪ್ರಭುವೇ, ನೀನು ನಿನ್ನನ್ನು ಈ ಲೋಕಕ್ಕೆ ತೋರ್ಪಡಿಸಿಕೊಳ್ಳದೆ ನಮಗೆ ಮಾತ್ರ ತೋರ್ಪಡಿಸಿಕೊಳ್ಳಬೇಕೆಂದಿರುವುದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೂದನು (ಇವನು ಇಸ್ಕರಿಯೋತನಲ್ಲ) - ಸ್ವಾಮೀ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವದಕ್ಕೆ ಏನು ಸಂಭವಿಸಿತು ಎಂದು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇಸ್ಕರಿಯೋತ ಅಲ್ಲದ ಮತ್ತೊಬ್ಬ ಯೂದನು, “ಸ್ವಾಮೀ, ನೀವು ಲೋಕಕ್ಕೆ ಪ್ರಕಟವಾಗದೆ ನಮಗೆ ಮಾತ್ರ ಪ್ರಕಟವಾಗುವುದು ಏಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತನ್ನಾ ಜುದಾಸಾನ್, ಜುದಾಸ್ ಇಸ್ಕರಿಯೊತ್ ನ್ಹಯ್, “ಧನಿಯಾ ತಿಯಾ ಅಮ್ಕಾ ಎವ್ಡೆಚ್ ತುಕಾ ದಾಕ್ವುನ್ ದಿ ಅನಿ ಜಗಾಕ್ ದಾಕ್ವುನ್ ದಿನೆಯ್ ಕಶ್ಯಾಕ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |