Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:4 - ಪರಿಶುದ್ದ ಬೈಬಲ್‌

4 ನಾನು ಹೋಗಲಿರುವ ಸ್ಥಳದ ದಾರಿಯು ನಿಮಗೆ ತಿಳಿದಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ಹೋಗುವ ಎಡೆಗೆ ಮಾರ್ಗವು ನಿಮಗೆ ತಿಳಿದೇ ಇದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಿಯಾ ಖೈ ಜಾವ್ಕ್ ಲಾಗ್ಲಾ ಥೈ ಜಾತಾಲಿ ವಾಟ್ ತುಮ್ಕಾ ಗೊತ್ತ್ ಹಾಯ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:4
13 ತಿಳಿವುಗಳ ಹೋಲಿಕೆ  

ನಾನೇ ಬಾಗಿಲಾಗಿದ್ದೇನೆ. ನನ್ನ ಮೂಲಕವಾಗಿ ಪ್ರವೇಶಿಸುವವರು ರಕ್ಷಣೆ ಹೊಂದುವರು. ಅವರು ಒಳಗೆ ಬರಬಲ್ಲರು. ಹೊರಗೆ ಹೋಗಬಲ್ಲರು ಮತ್ತು ಹುಲ್ಲುಗಾವಲನ್ನು ಕಂಡುಕೊಳ್ಳುವರು.


ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು.


ನನ್ನ ತಂದೆಯ ಮನೆಯಲ್ಲಿ ಅನೇಕ ಕೋಣೆಗಳಿವೆ. ಅದು ಸತ್ಯವಲ್ಲದಿದ್ದರೆ, ನಾನು ನಿಮಗೆ ಹೇಳುತ್ತಿರಲಿಲ್ಲ. ನಾನು ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಲು ಅಲ್ಲಿಗೆ ಹೋಗುತ್ತಿದ್ದೇನೆ.


ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು.


ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


‘ನಾನು ಹೊರಟುಹೋಗುತ್ತೇನೆ. ಆದರೆ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇನೆ’ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ತಂದೆಯ ಬಳಿಗೆ ಮರಳಿಹೋಗುವುದರ ಬಗ್ಗೆ ಸಂತೋಷಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.


ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು.


ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.


ತೋಮನು ಯೇಸುವಿಗೆ, “ಪ್ರಭುವೇ, ನೀನು ಹೋಗುತ್ತಿರುವುದು ಎಲ್ಲಿಗೆಂಬುದೇ ನಮಗೆ ಗೊತ್ತಿಲ್ಲ. ಹೀಗಿರಲು, ಆ ದಾರಿಯನ್ನು ನಾವು ಹೇಗೆ ತಿಳಿದುಕೊಳ್ಳಲಾದೀತು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು