ಯೋಹಾನ 15:18 - ಪರಿಶುದ್ದ ಬೈಬಲ್18 “ಈ ಲೋಕವು ನಿಮ್ಮನ್ನು ದ್ವೇಷ ಮಾಡಿದರೆ, ಅದು ಮೊದಲು ನನ್ನನ್ನೇ ದ್ವೇಷ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ಮೊದಲೇ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಲೋಕವು ನಿಮ್ಮ ಮೇಲೆ ದ್ವೇಷಮಾಡುವದಾದರೆ ಅದು ಮೊದಲು ನನ್ನ ಮೇಲೆ ದ್ವೇಷಮಾಡಿತೆಂದು ತಿಳುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಲೋಕವು ನಿಮ್ಮನ್ನು ದ್ವೇಷಿಸಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಿಸಿತು ಎಂದು ನೀವು ತಿಳಿಯಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಹ್ಯಾ ಜಗಾನ್ ತುಮ್ಚೊ ದ್ವೆಸ್ ಕರ್ಲ್ಯಾರ್ ತೆನಿ ತುಮ್ಚ್ಯಾನ್ಕಿ ಅದ್ದಿ ತೆನಿ ಮಾಜೊ ದ್ವೆಸ್ ಕರ್‍ಲಾ ಮನುನ್ ಯಾದ್ ಕರಾ. ಅಧ್ಯಾಯವನ್ನು ನೋಡಿ |
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.
ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”