Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:24 - ಪರಿಶುದ್ದ ಬೈಬಲ್‌

24 ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತಾರೂ ನಡಿಸದ ಕ್ರಿಯೆಗಳನ್ನು ನಾನು ಅವರಲ್ಲಿ ನಡಿಸದೆ ಇದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರು ನೋಡಿದ್ದಾರೆ, ಆದರೂ ನನ್ನ ಮೇಲೆಯೂ ನನ್ನ ತಂದೆಯ ಮೇಲೆಯೂ ದ್ವೇಷಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಮಿಯಾ ತೆಂಚ್ಯಾ ಮದ್ದಿ ಯೆವ್ನ್ ಕೊನ್ಬಿ ಕರುನಸಲ್ಲಿ ಕಾಮಾ ಕರುನ್‍ ದಾಕ್ವಿನಸ್ಲ್ಯಾರ್ ತೆಂಕಾ ತೆಂಚ್ಯಾ ಪಾಪಾಚ್ಯಾ ವಿಶಯಾತ್ ತೆಂಕಾ ಅಸಂಯ್ ದಿಶಿನಶಿ ಹೊತ್ತೆ, ತೆನಿ ತೆ ಸಗ್ಳೆ ಬಗಟ್ಲ್ಯಾನಿ ತೆಚೆಸಾಟ್ನಿ ತೆನಿ ಮಾಜೊ ಅನಿ ಮಾಜ್ಯಾ ಬಾಬಾಚೊ ದ್ವೆಸ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:24
36 ತಿಳಿವುಗಳ ಹೋಲಿಕೆ  

ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ‘ತಂದೆಯನ್ನು ನಮಗೆ ತೋರಿಸು’ ಎಂದು ಏಕೆ ಕೇಳುವಿರಿ?


“ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ.


ನನ್ನ ತಂದೆಯು ಮಾಡುವುದನ್ನು ನಾನು ಮಾಡದಿದ್ದರೆ, ನಾನು ಹೇಳುವುದನ್ನು ನಂಬಬೇಡಿ.


ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಆ ಕಾರ್ಯಗಳನ್ನು ನೋಡಿದ್ದೀರಿ. ಆ ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.


ಹುಟ್ಟುಕುರುಡನೊಬ್ಬನನ್ನು ಯಾರಾದರೂ ಎಂದಾದರೂ ಗುಣಪಡಿಸಿರುವುದು ಇದೇ ಮೊದಲನೆ ಸಲ.


ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಈ ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು.


ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.


ಯೇಸು ಆ ದೆವ್ವಕ್ಕೆ ಅವನನ್ನು ಬಿಟ್ಟುಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು.


ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


ಕೊನೆಯ ದಿನಗಳಲ್ಲಿ ಜನರು ಮಿತ್ರದ್ರೋಹಿಗಳಾಗಿರುತ್ತಾರೆ; ದುಡುಕಿ ಮೂರ್ಖ ಕೆಲಸಗಳನ್ನು ಮಾಡುವವರಾಗಿರುತ್ತಾರೆ; ಜಂಬದಿಂದ ಉಬ್ಬಿಕೊಂಡವರಾಗಿರುತ್ತಾರೆ; ದೇವರನ್ನು ಪ್ರೀತಿಸದೆ ವಿಲಾಸಪ್ರಿಯರಾಗಿರುತ್ತಾರೆ;


ಒಬ್ಬರ ಮೇಲೊಬ್ಬರು ಚಾಡಿ ಹೇಳುತ್ತಾರೆ; ದೇವರನ್ನು ದ್ವೇಷಿಸುತ್ತಾರೆ. ಅವರು ಸೊಕ್ಕಿನವರೂ ಅಹಂಕಾರಿಗಳೂ ಮತ್ತು ತಮ್ಮ ಬಗ್ಗೆ ಬಡಾಯಿಕೊಚ್ಚಿಕೊಳ್ಳುವವರೂ ಆಗಿದ್ದಾರೆ. ಅವರು ಕೇಡಿನ ಮಾರ್ಗಗಳನ್ನು ಹುಡುಕುವವರೂ ತಂದೆತಾಯಿಗಳಿಗೆ ಅವಿಧೇಯರೂ ಮೂರ್ಖರೂ ಆಗಿದ್ದಾರೆ.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.


ನನ್ನನ್ನು ನೋಡುವವನು ನನ್ನನ್ನು ಕಳುಹಿಸಿದಾತನನ್ನು ನಿಜವಾಗಿಯೂ ನೋಡುವವನಾಗಿದ್ದಾನೆ.


ನಾನು ನಿಮಗೆ ಮೊದಲೇ ಹೇಳಿದಂತೆ, ನೀವು ನನ್ನನ್ನು ನೋಡಿದ್ದರೂ ಇನ್ನೂ ನನ್ನನ್ನು ನಂಬುತ್ತಿಲ್ಲ.


ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.


ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.


ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ಆದರೆ ನನ್ನನ್ನು ಕಂಡುಕೊಳ್ಳಲಾರದವನು ತನಗೇ ಕೇಡುಮಾಡಿಕೊಳ್ಳುವನು. ನನ್ನನ್ನು ದ್ವೇಷಿಸುವ ಜನರೆಲ್ಲರೂ ಮರಣವನ್ನು ಪ್ರೀತಿಸುವರು.”


ಯೆಹೋವನ ಶತ್ರುಗಳು ಭಯದಿಂದ ನಡುಗುವರು. ಅವರು ಶಾಶ್ವತವಾಗಿ ದಂಡಿಸಲ್ಪಡುವರು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಆದರೆ ಮಹಾಯಾಜಕರು ಲಾಜರನನ್ನು ಸಹ ಕೊಲ್ಲಲು ಯೋಜನೆಗಳನ್ನು ಮಾಡಿದರು.


ಯೇಸು, “ನೀವು ನಿಜವಾಗಿಯೂ ಕುರುಡರಾಗಿದ್ದರೆ ಪಾಪವೆಂಬ ಅಪರಾಧಕ್ಕೆ ಗುರಿಯಾಗುತ್ತಿರಲಿಲ್ಲ. ಆದರೆ ನೀವು, ‘ನಮಗೆ ಕಣ್ಣು ಕಾಣುತ್ತದೆ’ ಎಂದು ಹೇಳುತ್ತೀರಿ. ಆದ್ದರಿಂದ ನೀವು ಪಾಪಿಗಳೇ ಆಗಿದ್ದೀರಿ” ಎಂದು ಹೇಳಿದನು.


ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ.


ನಾನು ಬಂದು ಈ ಲೋಕದ ಜನರೊಂದಿಗೆ ಮಾತಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ನಾನು ಅವರೊಂದಿಗೆ ಮಾತಾಡಿದ್ದೇನೆ. ಆದ್ದರಿಂದ ತಮ್ಮ ಪಾಪಕ್ಕೆ ಅವರಿಗೆ ಯಾವ ನೆವವೂ ಇಲ್ಲ.


“ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನೂ ದ್ವೇಷಿಸುವವನಾಗಿದ್ದಾನೆ.


ನನ್ನನ್ನು ನಂಬದಿರುವುದರಿಂದ ಜನರಲ್ಲಿ ಪಾಪವಿದೆಯೆಂದು ಆ ಸಹಾಯಕನು ನಿರೂಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು