ಯೋಹಾನ 15:6 - ಪರಿಶುದ್ದ ಬೈಬಲ್6 ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾವನು ನನ್ನಲ್ಲಿ ನೆಲೆಗೊಂಡಿರುವದಿಲ್ಲವೋ ಅವನು ಆ ಕೊಂಬೆಯಂತೆ ಹೊರಕ್ಕೆ ಬಿಸಾಡಲ್ಪಟ್ಟು ಒಣಗಿಹೋಗುವನು; ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುತ್ತಾರೆ, ಅವು ಸುಟ್ಟುಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಜೊ ಕೊನ್ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾಯ್ನಾ; ತೊ ಕಾತ್ರುನ್ ಕಾಡಲ್ಲ್ಯಾ ಫಾಟ್ಯಾ ಸರ್ಕೊ, ತೊ ಫಾಟೊ ವಾಳುನ್ ಜಾತಾ, ತಸ್ಲೆ ಫಾಟೆ ಗೊಳಾ ಕರುನ್ ಜಾಳ್ವುತಾತ್ ಮನುನ್ ಆಗಿತ್ ಟಾಕ್ತಾತ್. ಅಧ್ಯಾಯವನ್ನು ನೋಡಿ |
ನೀನು ಹೀಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ದ್ರಾಕ್ಷಾಲತೆಯು ಬದುಕಿ ಬೆಳೆಯುವುದೋ? ಇಲ್ಲ. ಮೊದಲನೆ ಹದ್ದು ದ್ರಾಕ್ಷಾಲತೆಗಳ ಬೇರುಗಳನ್ನು ಎಳೆದುಹಾಕಿ, ಅದರ ದ್ರಾಕ್ಷಿಹಣ್ಣುಗಳನ್ನು ಕಿತ್ತುಹಾಕುವುದು. ಆಗ ಚಿಗುರುಗಳು ಬಾಡಿ ಒಣಗಿಹೋಗುವವು. ಆ ಸಸಿಯು ಬಲಹೀನವಾಗುವುದು. ಆಗ ಅದನ್ನು ಬೇರುಸಹಿತ ಕಿತ್ತುಹಾಕಲು ಮಹಾ ಬಲವಾಗಲಿ ಅಥವಾ ದೊಡ್ಡಸೈನ್ಯವಾಗಲಿ ಅಗತ್ಯವಿರುವದಿಲ್ಲ.