Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:9 - ಪರಿಶುದ್ದ ಬೈಬಲ್‌

9 “ತಂದೆಯು ನನ್ನನ್ನು ಪ್ರೀತಿಸಿದಂತೆ ನಾನೂ ನಿಮ್ಮನ್ನು ಪ್ರೀತಿಸಿದೆನು. ಈಗ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ; ನನ್ನ ಪ್ರೀತಿಯಲ್ಲಿ ನೆಲೆಗೊಂಡಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ಈಗ ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕಸೊ ಮಾಜೊ ಬಾಬಾ ಮಾಜೊ ಪ್ರೆಮ್ ಕರ್‍ತಾ ತಸೊ ಮಿಯಾ ತುಮ್ಚೊ ಪ್ರೆಮ್ ಕರ್‍ತಾ, ತುಮಿ ಮಾಜ್ಯಾ ಪ್ರೆಮಾನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:9
9 ತಿಳಿವುಗಳ ಹೋಲಿಕೆ  

ನಾನು ನಿನ್ನ ನಿಜಸ್ವಭಾವವನ್ನು ಇವರಿಗೆ ಗೊತ್ತುಪಡಿಸಿದೆನು. ನಾನು ನಿನ್ನ ಸ್ವರೂಪವನ್ನು ಇವರಿಗೆ ಮತ್ತೆ ತೋರಿಸುವೆನು. ಆಗ ನನ್ನ ಮೇಲೆ ನಿನಗೆ ಯಾವ ಪ್ರೀತಿಯಿದೆಯೋ, ಅದೇ ಪ್ರೀತಿಯು ಇವರಲ್ಲಿಯೂ ಇರುವುದು ಮತ್ತು ನಾನು ಇವರಲ್ಲಿ ಇರುವೆನು.”


ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ಗೆಳೆಯರಿಗಾಗಿ ಸ್ವಂತ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.


ನನಗಿರುವ ಆನಂದವನ್ನು ನೀವೂ ಹೊಂದಿಕೊಳ್ಳಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನು ಹೇಳಿದ್ದೇನೆ. ನಿಮ್ಮ ಆನಂದವು ಪರಿಪೂರ್ಣವಾದ ಆನಂದವಾಗಿರಬೇಕೆಂದು ನಾನು ಬಯಸುತ್ತೇನೆ.


ನೀವು ಮತ್ತು ದೇವರ ಪರಿಶುದ್ಧ ಜನರೆಲ್ಲರೂ ಕ್ರಿಸ್ತನ ಪ್ರೀತಿಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ಬೇಕಾದ ಶಕ್ತಿಯನ್ನು ಹೊಂದಿದವರಾಗಿರಬೇಕೆಂದು ಪ್ರಾರ್ಥಿಸುತ್ತೇನೆ. ಕ್ರಿಸ್ತನ ಪ್ರೀತಿಯ ಉದ್ದಗಲಗಳನ್ನು ಮತ್ತು ಆಳ ಎತ್ತರಗಳನ್ನು ನೀವು ಅರ್ಥಮಾಡಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ.


ಆದರೆ ಪ್ರಿಯ ಸ್ನೇಹಿತರೇ, ನೀವು ನಿಮ್ಮ ಅತಿಪರಿಶುದ್ಧ ನಂಬಿಕೆಯ ಮೂಲಕ ದೃಢವಾಗಿರಿ. ಪವಿತ್ರಾತ್ಮಭರಿತರಾಗಿ ಪ್ರಾರ್ಥಿಸಿರಿ.


ತಂದೆಯು ಮಗನನ್ನು ಪ್ರೀತಿಸುತ್ತಾನೆ. ತಂದೆಯು ಮಗನಿಗೆ ಪ್ರತಿಯೊಂದರ ಮೇಲೆಯೂ ಅಧಿಕಾರವನ್ನು ಕೊಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು