ಯೋಹಾನ 16:10 - ಪರಿಶುದ್ದ ಬೈಬಲ್10 ನಾನು ತಂದೆಯ ಬಳಿಗೆ ಹೋಗುವುದರಿಂದ ನೀತಿಯ ವಿಷಯವಾಗಿಯೂ ಆತನು ಜನರಿಗೆ ನಿರೂಪಿಸುವನು. ಇನ್ನು ಮೇಲೆ ನೀವು ನನ್ನನ್ನು ನೋಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನ್ಯಾಯನೀತಿಯ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ತಂದೆಯ ಬಳಿಗೆ ಹೋಗಿ ಇನ್ನು ಮೇಲೆ ನಿಮಗೆ ಕಾಣಿಸದೆ ಇರುವದರಿಂದ ನೀತಿಯ ವಿಷಯದಲ್ಲಿಯೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ನನ್ನ ತಂದೆಯ ಬಳಿಗೆ ಹೋಗುವುದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣದಿಂದ, ನೀತಿಯ ವಿಷಯವಾಗಿಯೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತೆನಿ ಖಲೆ ಸಮಾ ಹಾಯ್ ತೆಕಾಚ್ ವ್ಹಾಕ್ಡೆ ಹೊವ್ನ್ ಹಾತ್, ಕಶ್ಯಾಕ್ ಮಟ್ಲ್ಯಾರ್ ಮಿಯಾ ಮಾಜ್ಯಾ ಬಾಬಾಕ್ಡೆ ಜಾವ್‍ಲಾ, ಅನಿ ಫಿಡೆ ಮಿಯಾ ಕೊನಾಕ್ಬಿ ಬಗುಕ್ ಗಾವಿನಾ, ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.