Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:12 - ಪರಿಶುದ್ದ ಬೈಬಲ್‌

12 “ನಾನು ನಿಮಗೆ ತಿಳಿಸಬೇಕಾದ ಇನ್ನೂ ಅನೇಕ ಸಂಗತಿಗಳಿವೆ. ಆದರೆ ಈಗ ಆ ಸಂಗತಿಗಳನ್ನು ಸ್ವೀಕರಿಸಿಕೊಳ್ಳಲು ನಿಮಗೆ ಬಹು ಕಷ್ಟವಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆ. ಸಧ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ನಿಮಗೆ ಹೇಳಬೇಕಾದದ್ದು ಇನ್ನೂ ಬಹಳ ಉಂಟು; ಆದರೆ ಸದ್ಯಕ್ಕೆ ಅದನ್ನು ಹೊರಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ. ಆದರೆ ನೀವು ಈಗ ಅವುಗಳನ್ನು ತಾಳಿಕೊಳ್ಳಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅನಿ ಲೈ ಮಿಯಾ ತುಮ್ಕಾ ಸಾಂಗ್ತಲೆ ಹಾಯ್ ಖರೆ ತುಮ್ಚ್ಯಾನ್ ತೆ ಸಗ್ಳೆ ಸಂಬಾಳುನ್ ಘೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:12
8 ತಿಳಿವುಗಳ ಹೋಲಿಕೆ  

ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.


ಯೇಸು ಇಂಥ ಅನೇಕ ಸಾಮ್ಯಗಳ ಮೂಲಕ ಜನರಿಗೆ ಅರ್ಥವಾಗುವಂತೆ ಉಪದೇಶಿಸಿದನು.


ಇದು ಆತನ ಮರಣಾನಂತರ ನಡೆದ ಸಂಗತಿ. ತಾನು ಜೀವಂತವಾಗಿರುವುದನ್ನು ಆತನು ಅಪೊಸ್ತಲರಿಗೆ ತೋರ್ಪಡಿಸಿದನು ಮತ್ತು ಶಕ್ತಿಯುತವಾದ ಅನೇಕ ಕಾರ್ಯಗಳನ್ನು ಮಾಡುವುದರ ಮೂಲಕ ಅದನ್ನು ನಿರೂಪಿಸಿದನು. ಯೇಸು ಜೀವಂತವಾಗಿ ಎದ್ದುಬಂದ ನಂತರದ ನಲವತ್ತು ದಿನಗಳ ಅವಧಿಯಲ್ಲಿ ಅಪೊಸ್ತಲರು ಆತನನ್ನು ಅನೇಕ ಸಲ ನೋಡಿದರು. ಯೇಸು ದೇವರ ರಾಜ್ಯದ ಕುರಿತು ಅಪೊಸ್ತಲರೊಂದಿಗೆ ಮಾತಾಡಿದನು.


“ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.


ನ್ಯಾಯತೀರ್ಪಿನ ಕುರಿತಾದ ಸತ್ಯವನ್ನು ಆ ಸಹಾಯಕನು ಈ ಲೋಕಕ್ಕೆ ಸಾಧರಪಡಿಸುವನು, ಏಕೆಂದರೆ ಈ ಲೋಕದ ಅಧಿಪತಿಗೆ ಈಗಾಗಲೇ ನ್ಯಾಯತೀರ್ಪಾಗಿದೆ.


ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು