Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:15 - ಪರಿಶುದ್ದ ಬೈಬಲ್‌

15 ನನ್ನ ತಂದೆಗೆ ಇರುವುದೆಲ್ಲಾ ನನ್ನದೇ. ಆದಕಾರಣ, ಪವಿತ್ರಾತ್ಮನು ನನ್ನಿಂದಲೇ ವಿಷಯಗಳನ್ನು ತೆಗೆದುಕೊಂಡು, ನಿಮಗೆ ತಿಳಿಸುತ್ತಾನೆ ಎಂದು ನಾನು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪಿತನಿಗೆ ಇರುವುದೆಲ್ಲವೂ ನನ್ನದೇ. ಆದುದರಿಂದಲೇ ಪವಿತ್ರಾತ್ಮ ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸುವರೆಂದು ನಾನು ಹೇಳಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಂದೆಗೆ ಇರುವದೆಲ್ಲಾ ನನ್ನದು; ಆದದರಿಂದಲೇ ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಸುವನೆಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತಂದೆಗೆ ಇರುವುದೆಲ್ಲವೂ ನನ್ನದೆ. ಆದ್ದರಿಂದಲೇ, ‘ಪವಿತ್ರಾತ್ಮ ದೇವರು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ಪ್ರಕಟಿಸುವರು,’ ಎಂದು ನಾನು ಹೇಳಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆ ಕಾಯ್ ಮಾಜ್ಯಾ ಬಾಬಾಚೆ ಮನುನ್ ಹಾಯ್ ತೆ ಮಾಜೆಚ್, ತೆಚೆಸಾಟ್ನಿ ಪವಿತ್ರ್ ಆತ್ಮೊ ಮಿಯಾ ಕಾಯ್ ದಿತಾ ತೆ ಘೆತಾ ಅನಿ ತುಮ್ಕಾ ಸಾಂಗ್ತಾ ಮನುನ್ ಮಿಯಾ ಮಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:15
12 ತಿಳಿವುಗಳ ಹೋಲಿಕೆ  

ನನ್ನಲ್ಲಿರುವುದೆಲ್ಲಾ ನಿನ್ನದೇ ಮತ್ತು ನಿನ್ನಲ್ಲಿರುವುದೆಲ್ಲಾ ನನ್ನದೇ. ಇವರಿಂದ ನನಗೆ ಮಹಿಮೆ ಉಂಟಾಗಿದೆ.


ತಂದೆಯು ಮಗನನ್ನು ಪ್ರೀತಿಸುತ್ತಾನೆ. ತಂದೆಯು ಮಗನಿಗೆ ಪ್ರತಿಯೊಂದರ ಮೇಲೆಯೂ ಅಧಿಕಾರವನ್ನು ಕೊಟ್ಟಿದ್ದಾನೆ.


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ನೆಲಸಿರಬೇಕೆಂಬುದೂ,


“ನನ್ನ ತಂದೆಯು ಎಲ್ಲವನ್ನೂ ನನಗೆ ಕೊಟ್ಟಿದ್ದಾನೆ. ಮಗನು ಯಾರೆಂಬುದು ಯಾರಿಗೂ ಗೊತ್ತಿಲ್ಲ. ತಂದೆಯೊಬ್ಬನಿಗೇ ಗೊತ್ತಿದೆ. ತಂದೆಯು ಯಾರೆಂಬುದು ಮಗನಿಗೆ ಮಾತ್ರ ಗೊತ್ತಿದೆ. ಮಗನು ತಂದೆಯ ಬಗ್ಗೆ ಯಾರಿಗೆ ತಿಳಿಸುತ್ತಾನೋ ಅವರು ಮಾತ್ರ ತಂದೆಯ ಬಗ್ಗೆ ತಿಳಿದುಕೊಳ್ಳುವರು.”


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು.


ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.)


ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ.


ಕ್ರಿಸ್ತನಲ್ಲಿ ಸರ್ವಜ್ಞಾನವು ಮತ್ತು ತಿಳುವಳಿಕೆಯು ಬಚ್ಚಿಟ್ಟಿರುವ ನಿಕ್ಷೇಪಗಳಂತಿವೆ.


ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು