Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:20 - ಪರಿಶುದ್ದ ಬೈಬಲ್‌

20 ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ, ಆದರೆ ಲೋಕವು ಸಂತೋಷಿಸುವದು; ನಿಮಗೆ ದುಃಖವಾಗುವದು, ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅತ್ತು ಗೋಳಾಡುವಿರಿ. ಆದರೆ ಲೋಕವು ಸಂತೋಷಿಸುವುದು; ನೀವು ದುಃಖಿಸುವಿರಿ ಆದರೆ ನಿಮ್ಮ ದುಃಖವು ಆನಂದವಾಗಿ ಮಾರ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ತುಮ್ಕಾ ಖರೆ ಹೊತ್ತೆ ಸಾಂಗ್ತಾ, ತುಮಿ ಕಳ್ವಳ್ತ್ಯಾಶಿ ಅನಿ ರಡ್ತ್ಯಾಶಿ, ಖರೆ ಸಗ್ಳೊ ಜಗ್ ಖುಶಿ ಹೊತಾ, ತುಮಿ ದುಕ್ಕಾನ್ ರ್‍ಹಾತ್ಯಾಶಿ, ಖರೆ ತುಮ್ಚೊ ದುಕ್ ಕುಶಿ ಹೊವ್ನ್ ಬದಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:20
44 ತಿಳಿವುಗಳ ಹೋಲಿಕೆ  

ನನ್ನ ಸಹೋದರ ಸಹೋದರಿಯರೇ, ನಿಮಗೆ ಅನೇಕ ತೊಂದರೆಗಳು ಬರುತ್ತವೆ. ಆದರೆ ಅವುಗಳು ಬಂದಾಗ ನೀವು ಬಹಳ ಸಂತೋಷಪಡಬೇಕು.


ಈಗ ದು:ಖದಿಂದಿರುವವರು ಧನ್ಯರು. ದೇವರು ಅವರನ್ನು ಸಂತೈಸುವನು.


ದುಃಖಿತರಂತೆ ಕಂಡರೂ ಯಾವಾಗಲೂ ಉಲ್ಲಾಸಿಸುವವರಾಗಿದ್ದೇವೆ; ಬಡವರಂತೆ ಕಂಡರೂ ಅನೇಕರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿ ಮಾಡುತ್ತಿದ್ದೇವೆ; ಏನೂ ಇಲ್ಲದವರಂತೆ ಕಂಡರೂ ವಾಸ್ತವವಾಗಿ ಎಲ್ಲವನ್ನೂ ಹೊಂದಿದವರಾಗಿದ್ದೇವೆ.


ಮರಿಯಳು ಹೋಗಿ ಆತನ ಶಿಷ್ಯರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಿದ್ದರು.


ದುಬರ್ಲಗೊಂಡ ಮತ್ತು ದಣಿದ ಜನರಿಗೆ ನಾನು ಶಕ್ತಿಯನ್ನೂ ವಿಶ್ರಾಂತಿಯನ್ನೂ ಕೊಡುವೆನು.”


ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.


ಯೇಸುವೇ ಇಸ್ರೇಲ್ ಜನರನ್ನು (ಯೆಹೂದ್ಯರನ್ನು) ಬಿಡಿಸುತ್ತಾನೆಂದು ನಾವು ನಿರೀಕ್ಷಿಸಿಕೊಂಡಿದ್ದೆವು. ಆದರೆ ಇದೆಲ್ಲಾ ನಡೆದುಹೋಯಿತು. “ಈಗ ಮತ್ತೊಂದು ಸಂಗತಿಯಾಗಿದೆ. ಈಗಾಗಲೇ ಆತನು ಸತ್ತು ಮೂರು ದಿನಗಳಾದವು.


ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ.


ಆತನ ಕೋಪವು ಕ್ಷಣಮಾತ್ರವಿರುವುದು. ಆತನ ಪ್ರೀತಿಯಾದರೋ ಶಾಶ್ವತವಾದದ್ದು. ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ಇಷ್ಟು ಮಾತ್ರವಲ್ಲದೆ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಾವು ದೇವರಲ್ಲಿ ಹರ್ಷಿಸುತ್ತೇವೆ. ಈಗ ನಾವು ದೇವರ ಸ್ನೇಹಿತರಾಗಿರುವುದು ಯೇಸುವಿನಿಂದಲೇ.


ಯೇಸು ಅವರಿಗೆ, “ನೀವು ಯಾವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರಿಬ್ಬರು ಅಲ್ಲೇ ನಿಂತರು. ಅವರ ಮುಖಗಳು ಬಹಳ ದುಃಖದಿಂದ ತುಂಬಿಹೋಗಿದ್ದವು.


ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ದೊಡ್ಡಗುಂಪಾಗಿ ಸೇರಿದ್ದ ಸ್ತ್ರೀಯರು ಯೇಸುವಿಗಾಗಿ ದುಃಖಪಟ್ಟು ಎದೆ ಬಡಿದುಕೊಂಡು ಗೋಳಾಡುತ್ತಿದ್ದರು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ಅವಳು ತನ್ನನ್ನು ಘನಪಡಿಸಿಕೊಂಡು ವೈಭವದಿಂದ ಜೀವಿಸಿದಳು. ಆದ್ದರಿಂದ ಅದಕ್ಕೆ ತಕ್ಕಂತೆ ಸಂಕಟವನ್ನೂ ದುಃಖವನ್ನೂ ಅವಳಿಗೆ ಬರಮಾಡಿರಿ. ‘ನಾನು ನನ್ನ ಸಿಂಹಾಸನದ ಮೇಲೆ ಕುಳಿತಿರುವ ರಾಣಿ. ನಾನು ವಿಧವೆಯಲ್ಲ, ನಾನು ಎಂದೆಂದಿಗೂ ದುಃಖಿಸುವುದಿಲ್ಲ’ ಎಂದು ಅವಳು ತನಗೆ ತಾನೇ ಹೇಳಿಕೊಳ್ಳುತ್ತಾಳೆ.


ಈ ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಆ ಜನರು ಹೀಗೆ ಮಾಡುತ್ತಾರೆ.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದರಿಂದ ನಿಮ್ಮ ಹೃದಯಗಳು ದುಃಖದಿಂದ ತುಂಬಿಹೋಗಿವೆ.


ಬಳಿಕ ಪೇತ್ರನು ಹೊರಗೆ ಹೋಗಿ ಬಹು ದುಃಖದಿಂದ ಅತ್ತನು.


ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರ ಬಳಿ ಹೋದನು. ಅವರು ನಿದ್ರೆ ಮಾಡುತ್ತಿದ್ದರು. (ಅವರು ದುಃಖದಿಂದ ಆಯಾಸಗೊಂಡಿದ್ದರು.)


ಹಸಿವೆಗೊಂಡಿರುವ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಅಳುತ್ತಿರುವ ನೀವು ಧನ್ಯರು; ಆನಂದದಿಂದ ನೀವು ನಗುವಿರಿ.


ಪೇತ್ರನು ಇದನ್ನು ಹೇಳಿದ ಮೇಲೆ ಕೋಳಿ ಎರಡನೇ ಸಾರಿ ಕೂಗಿತು. “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ, ನೀನು ನನ್ನನ್ನು ತಿಳಿದಿಲ್ಲವೆಂದು ಮೂರು ಸಾರಿ ಹೇಳುವೆ” ಎಂದು ಯೇಸು ತನಗೆ ಹೇಳಿದ್ದನ್ನು ಪೇತ್ರನು ಜ್ಞಾಪಿಸಿಕೊಂಡು ಬಹಳ ದುಃಖದಿಂದ ಗೋಳಾಡಿದನು.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.


ನೀತಿವಂತರಿಗೋಸ್ಕರ ಬೆಳಕೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಪ್ರಕಾಶಿಸುತ್ತವೆ.


ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.


ಯೇಸು ಹೀಗೆ ಹೇಳಿದ ಮೇಲೆ, ತನ್ನ ಕೈಗಳನ್ನು ಮತ್ತು ಪಕ್ಕೆಯನ್ನು ಅವರಿಗೆ ತೋರಿಸಿದನು. ಪ್ರಭುವನ್ನು ಕಂಡು ಶಿಷ್ಯರಿಗೆ ಬಹು ಸಂತೋಷವಾಯಿತು.


“ಆದರೆ ರೈತರು ಮಗನನ್ನು ನೋಡಿದಾಗ, ‘ಇವನು ತೋಟದ ಒಡೆಯನ ಮಗನು. ಈ ತೋಟ ಇವನದಾಗುವುದು. ನಾವು ಇವನನ್ನು ಕೊಂದರೆ, ಈ ತೋಟ ನಮ್ಮದಾಗುವುದು’ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು