ಯೋಹಾನ 16:21 - ಪರಿಶುದ್ದ ಬೈಬಲ್21 “ಗರ್ಭಿಣಿ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ. ಮಗುವು ಜನಿಸಿದಾಗ, ಲೋಕದಲ್ಲಿ ಮಗುವೊಂದು ಜನಿಸಿತೆಂಬ ಸಂತೋಷದಿಂದ ಆಕೆ ಆ ವೇದನೆಯನ್ನು ಮರೆತುಬಿಡುತ್ತಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆಂಬ ಉಲ್ಲಾಸದಿಂದ ತಾನು ಪಟ್ಟ ವೇದನೆಯನ್ನು ಮರೆತುಬಿಡುತ್ತಾಳೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲ ಬಂತೆಂದು ಆಕೆಗೆ ದುಃಖವಾಗುತ್ತದೆ; ಆದರೆ ಕೂಸನ್ನು ಹೆತ್ತ ಮೇಲೆ ಲೋಕದಲ್ಲಿ ಒಬ್ಬ ಮನುಷ್ಯನು ಹುಟ್ಟಿದನೆಂಬ ಆನಂದದಿಂದ ಆ ಬೇನೆಯನ್ನು ನೆನಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಒಬ್ಬ ಸ್ತ್ರೀಗೆ ಪ್ರಸವ ಗಳಿಗೆ ಬಂದಾಗ ದುಃಖವಿರುವುದು. ಆದರೆ ಆಕೆಯು ಮಗುವನ್ನು ಹೆತ್ತಾಗ ಈ ಲೋಕದೊಳಗೆ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಆಕೆಯು ಇನ್ನು ನೆನಪಿಗೆ ತಂದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಎಕ್ ಪೊರಾಕ್ ಜಲಮ್ ದಿತಲೊ ಎಳ್ ಯೆಲ್ಲ್ಯಾ ತನ್ನಾ ಅಪ್ನಾಚೊ ಕಸ್ಟಾಚೊ ಎಳ್ ಯೆಲೊ ಮನುನ್ ಎಕ್ ಬಾಯ್ಕೊಮನ್ಸಿಕ್ ದುಕ್ ಹೊತಾ, ಖರೆ ಪೊರ್ ಉಪಾಜಲ್ಲ್ಯಾ ತನ್ನಾ ತಿ ತೊ ಸಗ್ಳೊ ಕಸ್ಟ್ ಇಸರ್‍ತಾ, ಕಶ್ಯಾಕ್ ಮಟ್ಲ್ಯಾರ್, ಹ್ಯಾ ಜಗಾತ್ ಎಕ್ ಪೊರ್ ಉಪಾಜ್ಲೊ ಮಟಲ್ಲ್ಯಾಸಾಟ್ನಿ ತಿ ಕುಶಿ ಹೊತಾ. ಅಧ್ಯಾಯವನ್ನು ನೋಡಿ |
“ಪ್ರಸವವೇದನೆಗಿಂತ ಮೊದಲು ಸ್ತ್ರೀಯು ಮಗುವನ್ನು ಹೆರುವದಿಲ್ಲ. ತಾನು ಹೆರುವ ಶಿಶುವನ್ನು ನೋಡುವ ಮೊದಲು ಸ್ತ್ರೀಯು ಪ್ರಸವವೇದನೆ ಅನುಭವಿಸಲೇಬೇಕು. ಅದೇ ರೀತಿಯಲ್ಲಿ ಒಂದೇ ದಿನದಲ್ಲಿ ಹೊಸ ಭೂಮ್ಯಾಕಾಶಗಳು ಉಂಟಾಗುವದನ್ನು ಯಾರೂ ನೋಡುವದಿಲ್ಲ. ಒಂದೇ ದಿವಸದಲ್ಲಿ ಉಂಟಾದ ಜನಾಂಗದ ಬಗ್ಗೆ ಯಾರೂ ಕೇಳಲಿಲ್ಲ. ದೇಶವು ಪ್ರಸವವೇದನೆಯಂಥ ಬೇನೆಯನ್ನು ಅನುಭವಿಸಬೇಕು. ಆ ಬಳಿಕ ದೇಶವು ಹೊಸ ಜನಾಂಗವೆಂಬ ಮಕ್ಕಳನ್ನು ಹೆರುವುದು.