ಯೋಹಾನ 16:22 - ಪರಿಶುದ್ದ ಬೈಬಲ್22 ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹಾಗೆಯೇ ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರಿಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವದು, ಮತ್ತು ನಿಮ್ಮ ಆನಂದವನ್ನು ಯಾರೂ ನಿವ್ಮಿುಂದ ತೆಗೆಯುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತಸೆಚ್ ತುಮ್ಚ್ಯಾ ವಾಂಗ್ಡಾಬಿ ಹೊತಾ, ತುಮಿ ಅತ್ತಾ ದುಕಾತ್ ಹಾಶಿ, ಖರೆ ಮಿಯಾ ಅನಿ ಎಗ್ದಾ ತುಮ್ಕಾ ಭೆಟ್ತಾನಾ ತುಮ್ಚಿ ಮನಾ ಖುಶಿನ್ ಭರಲ್ಲಿ ರ್‍ಹಾತ್ಯಾತ್. ತಿ ಕುಶಿ ಕೊನಾಕ್ಬಿ ತುಮ್ಚ್ಯಾಕ್ನಾ ಕಾಡುನ್ ನ್ಹೆವ್ಕ್ ಹೊಯ್ನಾ”. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.