30 ನಿನಗೆ ಎಲ್ಲಾ ಸಂಗತಿಗಳು ತಿಳಿದಿವೆಯೆಂದು ನಮಗೆ ಈಗ ತಿಳಿಯಿತು. ಒಬ್ಬನು ಪ್ರಶ್ನೆಯನ್ನು ಕೇಳುವುದಕ್ಕಿಂತ ಮೊದಲೇ ನೀನು ಅವನ ಪ್ರಶ್ನೆಗೆ ಉತ್ತರ ಕೊಡಬಲ್ಲೆ. ಇದರಿಂದಾಗಿ, ನೀನು ದೇವರಿಂದ ಬಂದವನೆಂದು ನಾವು ನಂಬುತ್ತೇವೆ” ಎಂದು ಹೇಳಿದರು.
30 ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.
30 ನೀವು ಎಲ್ಲಾ ತಿಳಿದವರೆಂದೂ ಯಾರೂ ನಿಮ್ಮನ್ನು ಪ್ರಶ್ನಿಸುವುದು ಅಗತ್ಯವಿಲ್ಲವೆಂದು ಈಗ ನಮಗೆ ತಿಳಿಯಿತು. ಆದ್ದರಿಂದ ನೀವು ದೇವರಿಂದ ಹೊರಟು ಬಂದವರೆಂದು ನಾವು ನಂಬುತ್ತೇವೆ,” ಎಂದರು.
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.
ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.
ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.
ಶಿಷ್ಯರಲ್ಲಿ ಕೆಲವರು, “‘ಸ್ವಲ್ಪಕಾಲದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ಪಲ್ಪಕಾಲವಾದ ಬಳಿಕ ನನ್ನನ್ನು ಮತ್ತೆ ನೋಡುವಿರಿ. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ’ ಎಂದು ಆತನು ಹೇಳಿದ್ದರ ಅರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ.
ಯೇಸು ಆ ಯೆಹೂದ್ಯರಿಗೆ, “ದೇವರು ನಿಜವಾಗಿಯೂ ನಿಮ್ಮ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ನಾನು ದೇವರಿಂದ ಬಂದು ಈಗ ಇಲ್ಲಿದ್ದೇನೆ. ನಾನು ಬಂದದ್ದು ನನ್ನ ಸ್ವಂತ ಅಧಿಕಾರದಿಂದಲ್ಲ. ದೇವರೇ ನನ್ನನ್ನು ಕಳುಹಿಸಿದನು.