ಯೋಹಾನ 16:4 - ಪರಿಶುದ್ದ ಬೈಬಲ್4 ಈಗ ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಹೀಗಿರಲು, ಈ ಸಂಗತಿಗಳೆಲ್ಲಾ ನೆರವೇರುವ ಕಾಲ ಬಂದಾಗ ನನ್ನ ಎಚ್ಚರಿಕೆಯ ಮಾತುಗಳನ್ನು ನೀವು ಜ್ಞಾಪಿಸಿಕೊಳ್ಳುವಿರಿ. “ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಆರಂಭದಲ್ಲೇ ತಿಳಿಸಲಿಲ್ಲ. ಏಕೆಂದರೆ, ಆಗ ನಾನು ನಿಮ್ಮ ಸಂಗಡವಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಕಾಲ ಬಂದಾಗ ಆತನು ನಮಗೆ ಇಂಥಿಂಥದನ್ನು ಹೇಳಿದನಲ್ಲಾ ಎಂದು ನೀವು ನೆನಪಿಗೆ ತರುವಂತೆ ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಅವರ ಸಮಯ ಬಂದಾಗ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆಂದು ನೀವು ಜ್ಞಾಪಕ ಮಾಡಿಕೊಳ್ಳುವಂತೆ ಮುಂಚಿತವಾಗಿಯೇ ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಇವುಗಳನ್ನು ಪ್ರಾರಂಭದಲ್ಲೇ ನಿಮಗೆ ಹೇಳಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೆನಿ ಹೆ ಸಗ್ಳೆ ಕರ್‍ತಲೊ ಎಳ್ ಯೆಲ್ಲ್ಯಾ ತನ್ನಾ ತುಮ್ಕಾ ಮಿಯಾ ದಿಲ್ಲಿ ಉಶಾರ್ಕಿ ಯಾದ್ ರಾಂವ್ದಿತ್ ಮನುನ್ ಹೆ ಸಗ್ಳೆ ಮಿಯಾ ತುಮ್ಕಾ ಸಾಂಗುಕ್ ಲಾಗ್ಲಾ”. ಅದ್ದಿಚ್ ಮಿಯಾ ಹೆ ಸಗ್ಳೆ ತುಮ್ಕಾ ಸಾಂಗುನತ್ತೊ, ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಚ್ಯಾ ವಾಗ್ಡಾ ಹೊತ್ತೊ. ಅಧ್ಯಾಯವನ್ನು ನೋಡಿ |