ಯೋಹಾನ 17:1 - ಪರಿಶುದ್ದ ಬೈಬಲ್1 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಪರಲೋಕದ ಕಡೆಗೆ ನೋಡಿ ಹೀಗೆ ಪ್ರಾರ್ಥಿಸಿದನು: “ತಂದೆಯೇ, ಸಮಯವು ಬಂದಿದೆ. ನಿನ್ನ ಮಗನನ್ನು ಮಹಿಮೆಪಡಿಸು. ಆಗ ಮಗನು ನಿನ್ನನ್ನು ಮಹಿಮೆಪಡಿಸಬಲ್ಲನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಹೆ ಸಗ್ಳೆ ಸಾಂಗುನ್ ಹೊಲ್ಲ್ಯಾ ತನ್ನಾ ಜೆಜುನ್ ವೈರ್ ಸರ್ಗಾಕ್ಡೆ ಬಗಟ್ಲ್ಯಾನ್. ಅನಿ, ಬಾಬಾ ಎಳ್ ಯೆಲೊ, ಲೊಕಾನ್ ತುಕಾ ಮಹಿಮಾ ದಿವಸಾಟ್ನಿ ಲೆಕಾಕ್ ತಿಯಾ ತುಜಿ ಮಹಿಮಾ ದಿ. ಅಧ್ಯಾಯವನ್ನು ನೋಡಿ |
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.