ಯೋಹಾನ 17:11 - ಪರಿಶುದ್ದ ಬೈಬಲ್11 “ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇನ್ನು ನಾನು ಲೋಕದಲ್ಲಿ ಇರುವದಿಲ್ಲ, ಇವರು ಲೋಕದಲ್ಲಿ ಇರುತ್ತಾರೆ, ನಾನು ನಿನ್ನ ಬಳಿಗೆ ಬರುತ್ತೇನೆ. ಪವಿತ್ರನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅತ್ತಾ ಮಿಯಾ ತುಜೆಕ್ಡೆ ಯೆವ್ಲಾಲಾ, ಅನಿ ಲೈ ಎಳ್ ಮಿಯಾ ಹ್ಯಾ ಜಗಾತ್ ರ್‍ಹಾಯ್ನಾ, ಖರೆ ತೆನಿ ಹ್ಯಾ ಜಗಾತುಚ್ ರ್‍ಹಾತ್ಯಾತ್. ಪವಿತ್ರ್ ಬಾಬಾ! ತುಜ್ಯಾ ನಾವಾಚ್ಯಾ ಬಳಾನ್ ತೆಂಕಾ ತಿಯಾ ರಾಕ್, ತೆಚ್ ನಾವ್ ತಿಯಾ ಮಾಕಾಬಿ ದಿಲ್ಲೆ. ಅಸೆ, ಕಶೆ ಮಿಯಾ ಅನಿ ತಿಯಾ ಎಕ್ ಹೊವ್ನ್ ಹಾಂವ್, ತಸೆ ತೆನಿಬಿ ಎಕ್ ಹೊವ್ನ್ ರ್‍ಹಾಂವ್ದಿತ್. ಅಧ್ಯಾಯವನ್ನು ನೋಡಿ |
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”