ಯೋಹಾನ 17:13 - ಪರಿಶುದ್ದ ಬೈಬಲ್13 “ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಆದರೆ ನಾನು ಈ ಲೋಕದಲ್ಲಿ ಇನ್ನೂ ಇರುವಾಗಲೇ ಈ ಸಂಗತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇನೆ. ಈ ಜನರು ನನ್ನ ಆನಂದವನ್ನು ಹೊಂದಿದವರಾಗಿರಬೇಕೆಂದು ಮತ್ತು ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರಬೇಕೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಈಗ ನಿನ್ನ ಬಳಿಗೆ ಬರುವವನಾಗಿದ್ದೇನೆ; ಆದದರಿಂದ ಇವರಲ್ಲಿ ನನ್ನ ಆನಂದವು ಪರಿಪೂರ್ಣವಾಗಿರುವಂತೆ ಲೋಕದಲ್ಲಿದ್ದು ಈ ಮಾತುಗಳನ್ನು ಆಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಈಗ ನಾನು ನಿಮ್ಮ ಬಳಿಗೆ ಬರುತ್ತೇನೆ. ನನ್ನ ಆನಂದವು ಅವರಲ್ಲಿ ಪರಿಪೂರ್ಣವಾಗುವಂತೆ ನಾನು ಲೋಕದಲ್ಲಿ ಇದ್ದು ಇವೆಲ್ಲವನ್ನು ಮಾತನಾಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖರೆ ಅತ್ತಾ ಮಿಯಾ ತುಜೆಕ್ಡೆ ಯೆವ್ಲಾ, ಅನಿ ಮಿಯಾ ಹೆ ಸಗ್ಳೆ ಹ್ಯಾ ಜಗಾತ್ ಸಾಂಗ್ತಾ, ಕಶ್ಯಾಕ್ ಮಟ್ಲ್ಯಾರ್ ಮಾಜಿ ಕುಶಿ ಸಂಪುರ್ನ್ ರಿತಿನ್ ತೆಂಚ್ಯಾ ಮನಾತ್ನಿ ಭರುನ್ ರ್‍ಹಾಂವ್ದಿತ್. ಅಧ್ಯಾಯವನ್ನು ನೋಡಿ |