ಯೋಹಾನ 17:15 - ಪರಿಶುದ್ದ ಬೈಬಲ್15 “ನೀನು ಇವರನ್ನು ಈ ಲೋಕದಿಂದ ತೆಗೆದುಕೊಳ್ಳಬೇಕೆಂದು ನಾನು ಕೇಳುತ್ತಿಲ್ಲ. ಆದರೆ ಇವರನ್ನು ಕೆಡುಕನಿಂದ (ಸೈತಾನನಿಂದ) ತಪ್ಪಿಸಿ ಸುರಕ್ಷಿತವಾಗಿರಿಸಬೇಕೆಂದು ನಾನು ಕೇಳಿಕೊಳ್ಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇವರನ್ನು ಲೋಕದೊಳಗಿಂದ ತೆಗೆದುಕೊಂಡು ಹೋಗಬೇಕೆಂದು ನಾನು ಕೇಳಿಕೊಳ್ಳುವದಿಲ್ಲ; ಕೆಡುಕನಿಂದ ತಪ್ಪಿಸಿ ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀವು ಇವರನ್ನು ಲೋಕದಿಂದ ತೆಗೆಯಬೇಕೆಂದು ಬೇಡಿಕೊಳ್ಳದೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತೆಂಕಾ ಹ್ಯಾ ಜಗಾತ್ನಾ ಕಡೆಕ್ ಕಾಡುನ್ ಘೆ ಮನುನ್ ಮಿಯಾ ಮಾಗಿನಾ. ಖರೆ ತೆಂಕಾ ತ್ಯಾ ಬುರ್ಶ್ಯಾಚ್ಯಾ ಹಾತಾತ್ನಾ ರಾಕ್ ಮನುನ್ ಮಾಗ್ತಾ. ಅಧ್ಯಾಯವನ್ನು ನೋಡಿ |
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”