Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:22 - ಪರಿಶುದ್ದ ಬೈಬಲ್‌

22 ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಈ ಜನರಿಗೆ ಕೊಟ್ಟಿದ್ದೇನೆ. ನೀನು ಮತ್ತು ನಾನು ಒಂದಾಗಿರುವಂತೆ ಇವರೂ ಒಂದಾಗಿರಬೇಕೆಂದು ನಾನು ಇವರಿಗೆ ಈ ಮಹಿಮೆಯನ್ನು ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾವು ಒಂದಾಗಿರುವ ಪ್ರಕಾರ ಅವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಅವರಿಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರುವಂತೆ ನೀವು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಿಯಾ ಮಾಕಾ ದಿಲ್ಲಿ ಮಹಿಮಾಚ್ ಮಿಯಾ ಲೊಕಾಕ್ನಿ ದಿಲಾ, ಅಶೆ ತಿಯಾ ಅನಿ ಮಿಯಾ ಕಶೆ ಎಕ್ ಹೊವ್ನ್ ಹಾಂವ್ ತಸೆಚ್ ತೆನಿಬಿ ಎಕ್ ಹೊವ್ನ್ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:22
23 ತಿಳಿವುಗಳ ಹೋಲಿಕೆ  

ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.


ನಾನು ನನ್ನ ತಂದೆಯಲ್ಲಿರುವುದನ್ನು ನೀವು ಆ ದಿನದಂದು ತಿಳಿದುಕೊಳ್ಳುವಿರಿ. ನೀವು ನನ್ನಲ್ಲಿರುವುದನ್ನೂ ನಾನು ನಿಮ್ಮಲ್ಲಿರುವುದನ್ನೂ ತಿಳಿದುಕೊಳ್ಳುವಿರಿ.


ವಾಕ್ಯ ಎಂಬಾತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. ಆತನಿಂದಲೇ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.


ದೇವರ ಆಜ್ಞೆಗಳಿಗೆ ವಿಧೇಯನಾಗಿರುವವನು ದೇವರಲ್ಲಿ ನೆಲೆಸಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಸಿರುತ್ತಾನೆ. ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ಹೇಗೆ ತಿಳಿದದೆ? ದೇವರು ನಮಗೆ ದಯಪಾಲಿಸಿರುವ ಪವಿತ್ರಾತ್ಮನಿಂದಲೇ ನಮಗೆ ತಿಳಿದದೆ.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಾಗಿ ಕರೆದು ಅವರನ್ನು ಇಬ್ಬರಿಬ್ಬರಾಗಿ ಹೊರಗೆ ಕಳುಹಿಸಿದನು. ಯೇಸು ಅವರಿಗೆ ದೆವ್ವಗಳ ಮೇಲೆ ಅಧಿಕಾರವನ್ನು ನೀಡಿದನು.


ನಾವು ನೋಡಿದವುಗಳನ್ನೂ ಕೇಳಿದವುಗಳನ್ನೂ ಈಗ ನಿಮಗೆ ಹೇಳುತ್ತೇವೆ. ಏಕೆಂದರೆ ನೀವು ನಮ್ಮ ಅನ್ಯೋನ್ಯತೆಯಲ್ಲಿ ಪಾಲುಗಾರರಾಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಈ ಅನ್ಯೋನ್ಯತೆಯು ತಂದೆಯಾದ ದೇವರ ಮತ್ತು ಆತನ ಮಗನಾದ ಯೇಸು ಕ್ರಿಸ್ತನ ಸಂಗಡವಿರುವಂಥದ್ದು.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.


ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.


ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ.


ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.


ಹೀಗೆ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾಗುವುದರಿಂದ ದೇವರು ನಮಗೆ ತೀರ್ಪು ನೀಡುವ ದಿನದಂದು ನಾವು ನಿರ್ಭಯದಿಂದಿರುತ್ತೇವೆ. ಈ ಲೋಕದಲ್ಲಿ ನಾವು ಆತನಂತೆಯೇ (ಕ್ರಿಸ್ತನು ಅಥವಾ ದೇವರು) ಇರುವುದರಿಂದ ನಾವು ಧೈರ್ಯದಿಂದಿರುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು