Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:23 - ಪರಿಶುದ್ದ ಬೈಬಲ್‌

23 ನಾನು ಅವರಲ್ಲಿ ಇರುವೆನು ಮತ್ತು ನೀನು ನನ್ನಲ್ಲಿರುವೆ. ಆದ್ದರಿಂದ ಅವರು ಸಂಪೂರ್ಣವಾಗಿ ಒಂದಾಗಿರುವರು. ನೀನೇ ನನ್ನನ್ನು ಕಳುಹಿಸಿರುವುದಾಗಿ ಮತ್ತು ನೀನು ನನ್ನನ್ನು ಪ್ರೀತಿಸಿದಂತೆಯೇ ಈ ಜನರನ್ನೂ ಪ್ರೀತಿಸಿರುವುದಾಗಿ ಈ ಲೋಕವು ಆಗ ತಿಳಿದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಿಯಾ ತೆಂಚ್ಯಾ ಭುತ್ತುರ್ ಹಾಂವ್ ಅನಿ ತಿಯಾ ಮಾಜ್ಯಾ ಭುತ್ತುರ್ ಹಾಸ್ ಅಶೆ ತೆನಿ ಸಂಪುರ್ನ್ ರಿತಿನ್ ಎಕ್ ಹೊಂವ್ದಿತ್, ಹೆಕಾ ಲಾಗುನ್ ಹ್ಯೊ ಜಗ್ ಕಳ್ವುನ್ ಘೆಂವ್ದಿ ತಿಯಾಚ್ ಮಾಕಾ ಧಾಡುನ್ ದಿಲ್ಲೆ. ಅನಿ ತಿಯಾ ಕಸೊ ಮಾಜೊ ಪ್ರೆಮ್ ಕರ್‍ಲೆ ತಸೆಚ್ ತ್ಯೆಂಚೊಬಿ ಪ್ರೆಮ್ ಕರ್‍ತೆ ಮನುನ್ ತೆಂಕಾ ಕಳುಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:23
31 ತಿಳಿವುಗಳ ಹೋಲಿಕೆ  

ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವೆಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.


ಹೌದು, ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. ನೀವು ನನ್ನನ್ನು ಪ್ರೀತಿಸಿದರಿಂದ ಮತ್ತು ನಾನು ದೇವರಿಂದ ಬಂದೆನೆಂದು ನೀವು ನಂಬುವುದರಿಂದ ಆತನು ನಿಮ್ಮನ್ನು ಪ್ರೀತಿಸುತ್ತಾನೆ.


ತಂದೆಯು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ದೇವರ ಮಕ್ಕಳು ಎಂಬ ಹೆಸರನ್ನು ನಮಗೆ ಕೊಡುವಷ್ಟರ ಮಟ್ಟಿಗೆ ದೇವರು ನಮ್ಮನ್ನು ಪ್ರೀತಿಸಿದನು. ನಾವು ನಿಜವಾಗಿಯೂ ದೇವರ ಮಕ್ಕಳಾಗಿದ್ದೇವೆ. ಆದರೆ ಲೋಕದಲ್ಲಿರುವ ಜನರಾದರೋ ನಾವು ದೇವರ ಮಕ್ಕಳೆಂಬುದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವರು ದೇವರನ್ನು ತಿಳಿದಿಲ್ಲ.


ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ನೀವೂ ನನ್ನ ಶಿಷ್ಯರೆಂಬುದನ್ನು ಎಲ್ಲಾ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು.


ನಾವು ನೋಡಿದವುಗಳನ್ನೂ ಕೇಳಿದವುಗಳನ್ನೂ ಈಗ ನಿಮಗೆ ಹೇಳುತ್ತೇವೆ. ಏಕೆಂದರೆ ನೀವು ನಮ್ಮ ಅನ್ಯೋನ್ಯತೆಯಲ್ಲಿ ಪಾಲುಗಾರರಾಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಈ ಅನ್ಯೋನ್ಯತೆಯು ತಂದೆಯಾದ ದೇವರ ಮತ್ತು ಆತನ ಮಗನಾದ ಯೇಸು ಕ್ರಿಸ್ತನ ಸಂಗಡವಿರುವಂಥದ್ದು.


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯು ನಿಮ್ಮನ್ನೆಲ್ಲರನ್ನೂ ಸಂಪೂರ್ಣವಾದ ಒಗ್ಗಟ್ಟಿನಲ್ಲಿರಿಸುವುದು.


ನಾನು ನಿನ್ನ ನಿಜಸ್ವಭಾವವನ್ನು ಇವರಿಗೆ ಗೊತ್ತುಪಡಿಸಿದೆನು. ನಾನು ನಿನ್ನ ಸ್ವರೂಪವನ್ನು ಇವರಿಗೆ ಮತ್ತೆ ತೋರಿಸುವೆನು. ಆಗ ನನ್ನ ಮೇಲೆ ನಿನಗೆ ಯಾವ ಪ್ರೀತಿಯಿದೆಯೋ, ಅದೇ ಪ್ರೀತಿಯು ಇವರಲ್ಲಿಯೂ ಇರುವುದು ಮತ್ತು ನಾನು ಇವರಲ್ಲಿ ಇರುವೆನು.”


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.


ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂದು ನೀವು ನಿಜವಾಗಿಯೂ ನಂಬುವಿರಾ? ನಾನು ನಿಮಗೆ ಹೇಳುವ ಸಂಗತಿಗಳು ನನ್ನಿಂದಲೇ ಬಂದಂಥವುಗಳಲ್ಲ. ತಂದೆಯು ನನ್ನಲ್ಲಿ ವಾಸವಾಗಿದ್ದಾನೆ ಮತ್ತು ಆತನು ತನ್ನ ಕಾರ್ಯವನ್ನು ಮಾಡುತ್ತಿದ್ದಾನೆ.


ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.


ಆತ್ಮಿಕತೆಯಲ್ಲಿ ಪರಿಪೂರ್ಣವಾದ ಮಟ್ಟಕ್ಕೆ ಬಂದಿರುವ ನಾವೆಲ್ಲರೂ ಇದೇ ರೀತಿ ಯೋಚಿಸಬೇಕು. ನೀವು ಈ ಸಂಗತಿಗಳಲ್ಲಿ ಯಾವುದನ್ನಾದರೂ ಒಪ್ಪಿಕೊಳ್ಳದಿದ್ದರೆ ದೇವರೇ ನಿಮಗೆ ಅದನ್ನು ಸ್ಪಷ್ಟಪಡಿಸುವನು.


ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ವಾಸಿಸುತ್ತಾನೆ. ನಾನು ಅವನಲ್ಲಿ ವಾಸಿಸುತ್ತೇನೆ.


ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.


ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.


ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಆ ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದುಕೊಳ್ಳುವಿರಿ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು.


“ತಂದೆಯು ನನ್ನನ್ನು ಪ್ರೀತಿಸಿದಂತೆ ನಾನೂ ನಿಮ್ಮನ್ನು ಪ್ರೀತಿಸಿದೆನು. ಈಗ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.


“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು.


ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು