ಯೋಹಾನ 17:6 - ಪರಿಶುದ್ದ ಬೈಬಲ್6 “ನೀನು ಈ ಲೋಕದೊಳಗಿಂದ ಕೆಲವು ಜನರನ್ನು ನನಗೆ ಕೊಟ್ಟೆ. ನಿನ್ನ ಸ್ವರೂಪವನ್ನು ನಾನು ಇವರಿಗೆ ತೋರಿಸಿದೆನು. ಇವರು ನಿನ್ನವರಾಗಿದ್ದಾರೆ ಮತ್ತು ನೀನೇ ಇವರನ್ನು ನನಗೆ ಕೊಟ್ಟೆ. ಇವರು ನಿನ್ನ ಆಜ್ಞೆಗಳಿಗೆ ವಿಧೇಯರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಲೋಕದೊಳಗಿಂದ ನೀನು ನನಗೆ ಕೊಟ್ಟ ಮನುಷ್ಯರಿಗೆ ನಿನ್ನ ಹೆಸರನ್ನು ತಿಳಿಯಪಡಿಸಿದೆನು. ಇವರು ನಿನ್ನವರಾಗಿದ್ದರು, ನೀನು ಇವರನ್ನು ನನಗೆ ಕೊಟ್ಟೆ; ಮತ್ತು ಇವರು ನಿನ್ನ ವಾಕ್ಯವನ್ನು ಕೈಕೊಂಡು ನಡೆದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಲೋಕದೊಳಗಿಂದ ನೀವು ನನಗೆ ಕೊಟ್ಟ ಈ ನನ್ನ ಶಿಷ್ಯರಿಗೆ ನಾನು ನಿಮ್ಮ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ನೀವು ಇವರನ್ನು ನನಗೆ ಕೊಟ್ಟಿದ್ದೀರಿ. ಇವರು ನಿಮ್ಮ ವಾಕ್ಯವನ್ನು ಕೈಗೊಂಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಹ್ಯಾ ಜಗಾತ್ ಮಾಜೆ ಮನುನ್ ತಿಯಾ ಮಾಕಾ ದಿಲ್ಲ್ಯಾಕ್ನಿ ಮಿಯಾ ತುಜಿ ವಳಕ್ ಕರುನ್ ದಿಲೊ. ತೆನಿ ತುಕಾ ಸಮಂದ್ ಪಡಲ್ಲೆ ಹಾತ್, ಅನಿ ತಿಯಾಚ್ ತೆಂಕಾ ಮಾಜ್ಯಾ ತಾಬೆತ್ ದಿಲೆಯ್, ತೆನಿ ತುಜ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಹಾತ್. ಅಧ್ಯಾಯವನ್ನು ನೋಡಿ |
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.