ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)