Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:20 - ಪರಿಶುದ್ದ ಬೈಬಲ್‌

20 ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದಕ್ಕೆ ಯೇಸು - ನಾನು ಧಾರಾಳವಾಗಿ ಲೋಕದ ಮುಂದೆ ಮಾತಾಡಿದ್ದೇನೆ; ಯೆಹೂದ್ಯರೆಲ್ಲಾ ಕೂಡುವಂಥ ಸಭಾಮಂದಿರಗಳಲ್ಲಿಯೂ ದೇವಾಲಯದಲ್ಲಿಯೂ ಯಾವಾಗಲೂ ಉಪದೇಶಮಾಡುತ್ತಾ ಬಂದೆನು; ಮರೆಯಾಗಿ ಯಾವದನ್ನೂ ಮಾತಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ಜೆಜುನ್ ಮಿಯಾ ಕನ್ನಾಬಿ ಸಗ್ಳ್ಯಾಕ್ನಿ ಕಾಯ್ಬಿ ಧಾಪುನ್ ಘೆಯ್ನಸ್ತಾನಾ, ಬೊಲ್ಲಾ, ಮಿಯಾ ದೆವಾಚ್ಯಾ ಗುಡಿತ್ ಅನಿ ಸಿನಾಗೊಗಾತ್ನಿ ಮಾಜಿ ಸಗ್ಳಿ ಶಿಕಾಪಾ ಶಿಕ್ವುಲಾ, ಥೈ ಸಗ್ಳಿ ಲೊಕಾ ಗೊಳಾ ಹೊಲ್ಲಿ ರ್‍ಹಾಯ್ತ್, ಮಿಯಾ ಕಾಯ್ಬಿ ಧಾಪುನ್ ಥವ್ನ್ ಘೆವ್ನ್ ಬೊಲುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:20
25 ತಿಳಿವುಗಳ ಹೋಲಿಕೆ  

ಆದರೆ ಇವನು ಪ್ರತಿಯೊಬ್ಬರಿಗೂ ಕಾಣುವ ಮತ್ತು ಕೇಳುವ ಸ್ಥಳದಲ್ಲಿ ಉಪದೇಶಿಸುತ್ತಿದ್ದಾನೆ. ಅಲ್ಲದೆ ಉಪದೇಶ ಮಾಡದಂತೆ ಯಾರೂ ಅವನನ್ನು ತಡೆಯುತ್ತಿಲ್ಲ. ಒಂದುವೇಳೆ ಈತನೇ ಕ್ರಿಸ್ತನು ಎಂಬ ನಿರ್ಧಾರಕ್ಕೆ ನಾಯಕರುಗಳು ಬಂದಿರಬಹುದು.


ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.


ನನ್ನ ಬಳಿಗೆ ಬಂದು ನನ್ನ ಮಾತು ಕೇಳಿರಿ! ಬಾಬಿಲೋನ್ ಒಂದು ದೇಶವಾಗಿ ಪರಿಣಮಿಸುವಾಗ ನಾನು ಅಲ್ಲಿದ್ದೆನು. ಆದಿಯಿಂದಲೇ ನಾನು ಸ್ವಷ್ಟವಾಗಿ ಹೇಳಿದ್ದೇನೆ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿದ್ದೇನೆ.” ಯೆಶಾಯನು ಹೇಳಿದ್ದೇನೆಂದರೆ: “ಈಗ ನನ್ನ ಒಡೆಯನಾದ ಯೆಹೋವನೂ ಆತನ ಆತ್ಮನೂ ಈ ವಿಷಯಗಳನ್ನು ತಿಳಿಸಲು ನನ್ನನ್ನು ಕಳುಹಿಸಿದ್ದಾನೆ.


ಯೇಸು ಹಗಲೆಲ್ಲಾ ದೇವಾಲಯದಲ್ಲಿ ಜನರಿಗೆ ಉಪದೇಶಿಸುತ್ತಿದ್ದನು. ರಾತ್ರಿಯಲ್ಲಾದರೋ ಪಟ್ಟಣದ ಹೊರಗಿದ್ದ ಆಲಿವ್ ಮರಗಳ ಗುಡ್ಡದ ಮೇಲೆ ಇರುತ್ತಿದ್ದನು.


ತನ್ನ ಬಗ್ಗೆ ಜನರಿಗೆ ತಿಳಿಯಬೇಕೆಂದು ಅಪೇಕ್ಷಿಸುವವನು ತಾನು ಮಾಡುವ ಕಾರ್ಯಗಳನ್ನು ಮರೆಮಾಡಕೂಡದು. ನಿನ್ನನ್ನು ಈ ಲೋಕಕ್ಕೆ ತೋರಿಸಿಕೊ. ನೀನು ಮಾಡುವ ಕಾರ್ಯಗಳನ್ನು ಅವರು ನೋಡಲಿ” ಎಂದು ಹೇಳಿದರು.


ಯೇಸು ಸಭಾಮಂದಿರಗಳಲ್ಲಿ ಉಪದೇಶಿಸಲು ಪ್ರಾರಂಭಿಸಿದನು. ಜನರೆಲ್ಲರೂ ಆತನನ್ನು ಹೊಗಳಿದರು.


ನಂತರ ಯೇಸು ಆ ಜನರಿಗೆ, “ನೀವು ಅಪರಾಧಿಯನ್ನು ಬಂಧಿಸುವವರಂತೆ ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡು ಇಲ್ಲಿಗೆ ಬಂದಿದ್ದೀರಿ. ನಾನು ಪ್ರತಿದಿನವೂ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಅಲ್ಲಿ ಬಂಧಿಸಲೇ ಇಲ್ಲ.


ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.


ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.


ನಿಮ್ಮ ಬಗ್ಗೆ ಹೇಳಲು ನನ್ನಲ್ಲಿ ಅನೇಕ ಸಂಗತಿಗಳಿವೆ. ನಾನು ನಿಮಗೆ ತೀರ್ಪು ಮಾಡಬಲ್ಲೆನು. ಆದರೆ ನನ್ನನ್ನು ಕಳುಹಿಸಿದಾತನಿಂದ ನಾನು ಕೇಳಿದ ಸಂಗತಿಗಳನ್ನು ಮಾತ್ರ ಜನರಿಗೆ ಹೇಳುತ್ತೇನೆ. ಆತನು ಸತ್ಯವನ್ನೇ ತಿಳಿಸುತ್ತಾನೆ” ಎಂದು ಉತ್ತರಕೊಟ್ಟನು.


ಮರುದಿನ ನಸುಕಿನಲ್ಲೇ ಯೇಸು ದೇವಾಲಯಕ್ಕೆ ಮರಳಿ ಹೋದನು. ಎಲ್ಲಾ ಜನರು ಯೇಸುವಿನ ಬಳಿಗೆ ನೆರೆದುಬಂದರು. ಯೇಸು ಕುಳಿತುಕೊಂಡು ಜನರಿಗೆ ಉಪದೇಶಿಸಿದನು.


ಯೇಸುವು ದೇವಾಲಯದಲ್ಲಿ ಇನ್ನೂ ಉಪದೇಶಿಸುತ್ತಾ, “ಹೌದು, ನಿಮಗೆ ನನ್ನ ಬಗ್ಗೆ ಗೊತ್ತಿದೆ, ನಾನು ಎಲ್ಲಿಂದ ಬಂದೆನೆಂಬುದೂ ನಿಮಗೆ ತಿಳಿದಿದೆ. ಆದರೆ ನಾನು ಬಂದಿರುವುದು ನನ್ನ ಸ್ವಂತ ಅಧಿಕಾರದಿಂದಲ್ಲ. ಸತ್ಯಸ್ವರೂಪನು ನನ್ನನ್ನು ಕಳುಹಿಸಿದ್ದಾನೆ. ನಿಮಗೆ ಆತನು ಗೊತ್ತಿಲ್ಲ.


ಹಬ್ಬದಲ್ಲಿ ಸುಮಾರು ಅರ್ಧಭಾಗ ಮುಗಿದುಹೋಗಿತ್ತು. ಆಗ ಯೇಸು ದೇವಾಲಯಕ್ಕೆ ಹೋಗಿ ಉಪದೇಶಿಸಲು ಆರಂಭಿಸಿದನು.


ಪ್ರಧಾನಯಾಜಕನು ಇದನ್ನು ಕೇಳಿ ಬಹಳ ಕೋಪಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈ ಮನುಷ್ಯನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಯಾವ ಸಾಕ್ಷಿಗಳ ಅಗತ್ಯವೂ ಇಲ್ಲ. ಇವನು ಮಾಡಿದ ದೇವದೂಷಣೆಯನ್ನು ನೀವೇ ಕೇಳಿದಿರಿ.


ರಾಜನಾದ ಅಗ್ರಿಪ್ಪನಿಗೆ ಈ ಸಂಗತಿಗಳು ತಿಳಿದಿವೆ. ನಾನು ಅವನೊಂದಿಗೆ ಸ್ವತಂತ್ರವಾಗಿ ಮಾತಾಡಬಲ್ಲೆನು. ಈ ಎಲ್ಲಾ ಸಂಗತಿಗಳ ಬಗ್ಗೆ ಅವನು ಕೇಳಿದ್ದಾನೆಂದು ನನಗೆ ಗೊತ್ತಿದೆ. ಯಾಕೆಂದರೆ ಎಲ್ಲಾ ಜನರು ನೋಡಬಹುದಾದ ಸ್ಥಳದಲ್ಲಿ ಈ ಸಂಗತಿಗಳು ನೆರವೇರಿದವು.


“‘ಕ್ರಿಸ್ತನು ಅಡವಿಯಲ್ಲಿದ್ದಾನೆ!’ ಎಂದು ಕೆಲವರು ಹೇಳಿದರೆ ಅಡವಿಗೆ ಹೋಗಬೇಡಿ. ‘ಕ್ರಿಸ್ತನು ಆ ಕೋಣೆ ಒಳಗೆ ಇದ್ದಾನೆ!’ ಎಂದು ಹೇಳಿದರೆ ಅದನ್ನು ನಂಬಬೇಡಿ.


ವಿಜಯದ ಶುಭಾವಾರ್ತೆಯನ್ನು ನಾನು ಮಹಾಸಭೆಯಲ್ಲಿ ತಿಳಿಸಿದೆನು. ಯೆಹೋವನೇ, ನಾನು ಬಾಯಿ ಮುಚ್ಚಿಕೊಂಡಿರುವುದಿಲ್ಲ, ಅದು ನಿನಗೆ ತಿಳಿದೇ ಇದೆ.


ನಿನ್ನ ನಾಮದ ಕುರಿತು ನನ್ನ ಸಹೋದರರಿಗೆ ಹೇಳುವೆನು; ಮಹಾಸಭೆಯಲ್ಲಿ ನಿನ್ನನ್ನು ಸುತ್ತಿಸುವೆನು.


ಮುಂದೆ ಸಂಭವಿಸುವದೆಲ್ಲವನ್ನು ಯೇಸು ಅವರಿಗೆ ಹೇಳಿದನು. ಆತನು ಯಾವುದನ್ನೂ ರಹಸ್ಯವಾಗಿ ಇಡಲಿಲ್ಲ. ಪೇತ್ರನು ಯೇಸುವನ್ನು ಸ್ವಲ್ಪದೂರ ಕರೆದೊಯ್ದು, “ನೀನು ಹಾಗೆಲ್ಲಾ ಹೇಳಕೂಡದು” ಎಂದು ಪ್ರತಿಭಟಿಸಿದನು.


ಯೇಸು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶಿಸುತ್ತಿದ್ದಾಗ ಈ ಸಂಗತಿಗಳನ್ನೆಲ್ಲಾ ಹೇಳಿದನು.


ಹೀಗಿರಲು, ನೀನು ನನ್ನನ್ನು ಪ್ರಶ್ನಿಸುವುದೇಕೆ? ನನ್ನ ಉಪದೇಶವನ್ನು ಕೇಳಿದ ಜನರನ್ನು ಕೇಳು. ನಾನು ಹೇಳಿದ್ದನ್ನು ಅವರು ಬಲ್ಲರು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು