Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:22 - ಪರಿಶುದ್ದ ಬೈಬಲ್‌

22 ಯೇಸು ಹೀಗೆ ಹೇಳಿದ ಕೂಡಲೇ, ಅಲ್ಲಿ ನಿಂತಿದ್ದ ಕಾವಲುಗಾರರಲ್ಲಿ ಒಬ್ಬನು ಯೇಸುವಿಗೆ ಹೊಡೆದು, “ನೀನು ಪ್ರಧಾನಯಾಜಕನೊಂದಿಗೆ ಆ ರೀತಿ ಮಾತಾಡಕೂಡದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸು ಹೀಗೆ ಹೇಳಲು ಬಳಿಯಲ್ಲೇ ನಿಂತಿದ್ದ ಕಾವಲಾಳೊಬ್ಬನು, “ಪ್ರಧಾನ ಯಾಜಕರಿಗೆ ಉತ್ತರಕೊಡುವುದು ಹೀಗೆಯೇ?” ಎಂದು ಕೆನ್ನೆಗೆ ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸು ಈ ಮಾತನ್ನು ಹೇಳಿದಾಗ ಹತ್ತರ ನಿಂತಿದ್ದ ಓಲೇಕಾರರಲ್ಲಿ ಒಬ್ಬನು - ಮಹಾಯಾಜಕನಿಗೆ ಹೀಗೆ ಉತ್ತರಕೊಡುತ್ತೀಯಾ ಎಂದು ಹೇಳಿ ಆತನ ಕೆನ್ನೆಗೆ ಒಂದು ಏಟು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಇವುಗಳನ್ನು ಹೇಳಿದಾಗ, ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅಶೆ ಜೆಜುನ್ ಸಾಂಗಟಲ್ಲ್ಯಾ ತನ್ನಾ ಥೈ ಹೊತ್ತ್ಯಾ ಎಕ್ ರಾಕ್ವಾಲ್ಯಾನ್ ಜೆಜುಚ್ಯಾ ಕಾನಾಕ್ಡೆ ಠಪ್ರಾಕ್ ಮಾರ್‍ಲ್ಯಾನ್ ಅನಿ, “ಮೊಟ್ಯಾ ಯಾಜಕಾಕ್ಡೆ ಅಶೆ ಬೊಲುಚೆ ಮಟ್ಲ್ಯಾರ್ ತುಕಾ ಕವ್ಡೊ ಧೈರೊ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:22
12 ತಿಳಿವುಗಳ ಹೋಲಿಕೆ  

ಸೈನಿಕರು ಪದೇಪದೇ ಯೇಸುವಿನ ಬಳಿಗೆ ಬಂದು, “ಯೆಹೂದ್ಯರ ರಾಜನೇ, ನಿನಗೆ ನಮಸ್ಕಾರ!” ಎಂದು ಹೇಳುತ್ತಾ ಆತನ ಕೆನ್ನೆಗೆ ಹೊಡೆದರು.


ಅಲ್ಲಿದ್ದ ಕೆಲವು ಜನರು ಯೇಸುವಿಗೆ ಉಗುಳಿ, ಆತನ ಮುಖವನ್ನು ಮುಚ್ಚಿ, ಮುಷ್ಠಿಯಿಂದ ಗುದ್ದಿ, “ನಮಗೆ ಪ್ರವಾದನೆ ಹೇಳು” ಎಂದರು. ನಂತರ ಕಾವಲುಗಾರರು ಯೇಸುವನ್ನು ದೂರ ಕರೆದುಕೊಂಡು ಹೋಗಿ, ಆತನನ್ನು ಹೊಡೆದರು.


ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.


ಬಲಶಾಲಿಯಾದ ನಗರಿಯೇ, ನಿನ್ನ ಸೈನಿಕರನ್ನು ಕೂಡಿಸು. ಅವರು ನಮ್ಮ ಮೇಲೆ ದಾಳಿಮಾಡಲು ಸುತ್ತುವರಿದಿದ್ದಾರೆ. ಇಸ್ರೇಲಿನ ನ್ಯಾಯಾಧೀಶನ ಕೆನ್ನೆಯ ಮೇಲೆ ಕೋಲಿನಿಂದ ಹೊಡೆಯುವರು.


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ದ್ವಾರದಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಜನರು ನನ್ನ ಸುತ್ತಲೂ ಗುಂಪುಕೂಡಿದ್ದಾರೆ; ಅವರು ನನ್ನ ಮುಖಕ್ಕೆ ಹೊಡೆದು ಗೇಲಿ ಮಾಡುತ್ತಿದ್ದಾರೆ.


ಹೀಗಿರಲು, ನೀನು ನನ್ನನ್ನು ಪ್ರಶ್ನಿಸುವುದೇಕೆ? ನನ್ನ ಉಪದೇಶವನ್ನು ಕೇಳಿದ ಜನರನ್ನು ಕೇಳು. ನಾನು ಹೇಳಿದ್ದನ್ನು ಅವರು ಬಲ್ಲರು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು