ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.
ಇದಾದ ಮೇಲೆ, ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ಪ್ರಯತ್ನಿಸಿದನು. ಆದರೆ ಯೆಹೂದ್ಯರು, “ತನ್ನನ್ನು ರಾಜನೆಂದು ಹೇಳಿಕೊಳ್ಳುವ ಯಾವ ವ್ಯಕ್ತಿಯಾಗಲಿ ಸೀಸರನ ವಿರೋಧಿಯಾಗಿದ್ದಾನೆ. ಆದ್ದರಿಂದ ನೀನು ಈ ಮನುಷ್ಯನನ್ನು (ಯೇಸುವನ್ನು) ಬಿಡುಗಡೆ ಮಾಡಿದರೆ, ನೀನು ಸೀಸರನ ಮಿತ್ರನಲ್ಲವೆಂದೇ ಅದರ ಅರ್ಥ” ಎಂದು ಕೂಗಿದರು.
“ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೂ ಧರ್ಮೋಪದೇಶಕರಿಗೂ ಒಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆ ವಿಧಿಸಿ ಯೆಹೂದ್ಯರಲ್ಲದ ಜನರಿಗೆ ಒಪ್ಪಿಸುತ್ತಾರೆ.
ಪಿಲಾತನು ಯೆಹೂದ್ಯರಿಗೆ, “ಯೆಹೂದ್ಯರಾದ ನೀವೇ ಇವನನ್ನು ಕರೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ತೀರ್ಪುಮಾಡಿ” ಎಂದು ಹೇಳಿದನು. ಯೆಹೂದ್ಯರು, “ಆದರೆ ಒಬ್ಬನಿಗೆ ಮರಣದಂಡನೆ ವಿಧಿಸಲು ನಿನ್ನ ಕಾನೂನು ನಮಗೆ ಅವಕಾಶ ಕೊಡುವುದಿಲ್ಲ” ಎಂದು ಉತ್ತರಕೊಟ್ಟರು.
ನೀವು ಕೆಡುಕರಾಗಬಾರದು ಅಂದರೆ ಕೊಲೆಗಾರರಾಗಬಾರದು, ಕಳ್ಳರಾಗಬಾರದು ಮತ್ತು ಇತರರಿಗೆ ತೊಂದರೆ ಕೊಡಬಾರದು. ಇಂಥವುಗಳನ್ನು ಮಾಡುವವನು ಸಂಕಟಕ್ಕೆ ಒಳಗಾಗುವನು. ನಿಮ್ಮಲ್ಲಿ ಯಾರೂ ಆ ರೀತಿಯ ಸಂಕಟಕ್ಕೆ ಒಳಗಾಗಬಾರದು.