ಯೋಹಾನ 18:35 - ಪರಿಶುದ್ದ ಬೈಬಲ್35 ಪಿಲಾತನು, “ನಾನು ಯೆಹೂದ್ಯನಲ್ಲ! ನಿನ್ನ ಸ್ವಂತ ಜನರು ಮತ್ತು ಅವರ ಮಹಾಯಾಜಕರು ನಿನ್ನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಿದ್ದಾರೆ. ನೀನು ಏನು ಮಾಡಿದೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಪಿಲಾತನು, “ನಾನೇನು ಯೆಹೂದ್ಯನೇ? ನಿನ್ನ ಸ್ವಂತ ಜನರು ಮತ್ತು ಮುಖ್ಯ ಯಾಜಕರು ನಿನ್ನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಪಿಲಾತನು - ನಾನೇನು ಯೆಹೂದ್ಯನೇ? ನಿನ್ನ ಸ್ವಂತ ಜನವೂ ಮಹಾಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಜನಾಂಗವೂ ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತನ್ನಾ ಪಿಲಾತಾನ್ “ತಿಯಾ ಕಾಯ್ ಮಿಯಾ ಜುದೆವ್ ಮನುನ್ ಚಿಂತ್ಲೆ ಕಾಯ್? ತುಜ್ಯಾ ಸ್ವತಾಚ್ಯಾ ಲೊಕಾನಿ ಅನಿ ಯಾಜಕಾಂಚ್ಯಾ ಮುಖಂಡಾನಿ ತುಕಾ ಮಾಜ್ಯಾ ತಾಬೆತ್ ದಿಲ್ಯಾನಾತ್. ತಿಯಾ ಕಾಯ್ ಕರ್‍ಲೆ?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.
ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.
ಅರ್ತಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.