Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:37 - ಪರಿಶುದ್ದ ಬೈಬಲ್‌

37 ಪಿಲಾತನು, “ಹಾಗಾದರೆ ನೀನು ರಾಜ!” ಎಂದನು. ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಈ ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅದಕ್ಕೆ ಪಿಲಾತನು - ಹಾಗಾದರೆ ನೀನು ಅರಸನು ಹೌದಲ್ಲವೇ ಅಂದನು. ಯೇಸು ಅವನಿಗೆ - ನನ್ನನ್ನು ಅರಸನೆಂದು ನೀನೇ ಹೇಳಿದ್ದೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಹೇಳುವದಕ್ಕೋಸ್ಕರ ಹುಟ್ಟಿದವನು, ಅದಕ್ಕೋಸ್ಕರವೇ ಈ ಲೋಕಕ್ಕೆ ಬಂದಿದ್ದೇನೆ. ಸತ್ಯಪರರೆಲ್ಲರು ನನ್ನ ಮಾತಿಗೆ ಕಿವಿಕೊಡುತ್ತಾರೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತನ್ನಾ ಪಿಲಾತಾನ್ ತೆಕಾ, “ತಸೆ ಜಾಲ್ಯಾರ್ ತಿಯಾ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ಮಿಯಾ ರಾಜಾ ಮನುನ್ ತಿಯಾ ಮಟ್ಲೆ. ಮಿಯಾ ಉಪ್ಜುನ್ ಹ್ಯಾ ಜಗಾತ್ ಎಕ್ ಉದ್ದೆಸಾ ಸಾಟ್ನಿ ಯೆಲೊ, ತೆ ಕಾಯ್ ಮಟ್ಲ್ಯಾರ್, ಖರ್‍ಯಾ ತ್ಯಾ ವಿಶಯಾತ್ ಬೊಲ್ತಲೆ, ಜೆ ಕೊನ್- ಕೊನ್ ಹ್ಯಾ ಖರೆಪಾನಾಕ್ ಸಮಂದ್ ಪಡಲ್ಲೆ ಹಾತ್, ತೆನಿ ಮಿಯಾ ಸಾಂಗಲ್ಲೆ ಆಯಿಕ್ತ್ಯಾತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:37
26 ತಿಳಿವುಗಳ ಹೋಲಿಕೆ  

ದೇವರಿಂದ ಹುಟ್ಟಿದವನು ದೇವರು ಹೇಳುವ ಮಾತುಗಳನ್ನು ಸ್ವೀಕರಿಸಿಕೊಳ್ಳುವನು. ಆದರೆ ನೀವು ದೇವರಿಂದ ಹುಟ್ಟಿಲ್ಲದ ಕಾರಣ ಆತನ ಮಾತುಗಳನ್ನು ಸ್ವೀಕರಿಸಿಕೊಳ್ಳುವುದಿಲ್ಲ” ಎಂದನು.


ನಾವಾದರೋ ದೇವರಿಂದ ಬಂದವರು. ಆದ್ದರಿಂದ ದೇವರನ್ನು ಬಲ್ಲ ಜನರು ನಮಗೆ ಕಿವಿಗೊಡುತ್ತಾರೆ, ಆದರೆ ದೇವರಿಂದ ಬಂದಿಲ್ಲದ ಜನರು ನಮ್ಮ ಮಾತುಗಳನ್ನು ಕೇಳುವುದಿಲ್ಲ. ಯಾವುದು ಸತ್ಯವನ್ನು ಬೋಧಿಸುವ ಆತ್ಮ, ಯಾವುದು ಸುಳ್ಳನ್ನು ಬೋಧಿಸುವ ಆತ್ಮ ಎಂಬುದನ್ನು ಹೀಗೆ ತಿಳಿದುಕೊಳ್ಳುತ್ತೇವೆ.


ಯೇಸು, “ಹೌದು, ನಾನೇ ನನ್ನ ಬಗ್ಗೆ ಈ ಸಂಗತಿಗಳನ್ನು ಹೇಳುತ್ತಿದ್ದರೂ ಈ ಸಂಗತಿಗಳು ಜನರ ನಂಬಿಕೆಗೆ ಯೋಗ್ಯವಾಗಿವೆ. ಏಕೆಂದರೆ, ನಾನು ಎಲ್ಲಿಂದ ಬಂದೆನೆಂಬುದೂ ನಾನು ಎಲ್ಲಿಗೆ ಹೋಗುತ್ತೇನೆಂಬುದೂ ನನಗೆ ತಿಳಿದಿದೆ. ನಾನು ನಿಮ್ಮಂಥ ವ್ಯಕ್ತಿಯಲ್ಲ. ನಾನು ಎಲ್ಲಿಂದ ಬಂದೆನೆಂಬುದು ಮತ್ತು ಎಲ್ಲಿಗೆ ಹೋಗುತ್ತೇನೆಂಬುದು ನಿಮಗೆ ಗೊತ್ತಿಲ್ಲ.


ನಾವು ಸತ್ಯಮಾರ್ಗಕ್ಕೆ ಸೇರಿದವರೆಂಬುದನ್ನು ಈ ಮೂಲಕವಾಗಿಯೇ ತಿಳಿದುಕೊಳ್ಳುತ್ತೇವೆ. ನಮ್ಮ ಮನಸ್ಸಾಕ್ಷಿಯು ನಮ್ಮನ್ನು ತಪ್ಪಿತಸ್ಥರೆಂದು ಹೇಳಿದರೂ ನಾವು ದೇವರ ಎದುರಿನಲ್ಲಿ ಸಮಾಧಾನದಿಂದಿರಲು ಸಾಧ್ಯ. ಏಕೆಂದರೆ ನಮ್ಮ ಮನಸ್ಸಾಕ್ಷಿಗಿಂತ ದೇವರೇ ದೊಡ್ಡವನು. ಆತನಿಗೆ ಎಲ್ಲವೂ ತಿಳಿದಿದೆ.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ದಾವೀದನು ನನ್ನ ಸಾಮರ್ಥ್ಯದ ವಿಷಯದಲ್ಲಿ ಎಲ್ಲ ಜನಾಂಗಗಳವರಿಗೆ ಸಾಕ್ಷಿಯಾಗಿರುವಂತೆ ನಾನೇ ಮಾಡಿದೆನು. ನಾನು ದಾವೀದನಿಗೆ, ‘ನೀನು ಅಧಿಪತಿಯಾಗುವೆ ಮತ್ತು ಅನೇಕ ಜನಾಂಗಗಳಿಗೆ ನೀನು ಸೈನ್ಯಾಧಿಪತಿಯಾಗುವೆ’ ಎಂದು ಪ್ರಮಾಣ ಮಾಡಿದೆ.”


ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿರುವೆ!” ಎಂದು ಉತ್ತರಿಸಿದನು.


ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದ್ದು ಸರಿ” ಎಂದು ಉತ್ತರಿಸಿದನು.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಆತನು ತಾನು ಕಂಡಿರುವುದರ ಬಗ್ಗೆ ಮತ್ತು ಕೇಳಿರುವುದರ ಬಗ್ಗೆ ಸಾಕ್ಷಿ ನೀಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಜನರು ಸ್ವೀಕರಿಸಿಕೊಳ್ಳುವುದಿಲ್ಲ.


ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.


ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು.


“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:


ಏಷ್ಯಾ ಪ್ರದೇಶದಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನೆಂದರೆ: ವರ್ತಮಾನ, ಭೂತ, ಭವಿಷ್ಯತ್ಕಾಲಗಳಲ್ಲಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು


ನಾವು ಮರಣವನ್ನು (ಪಾಪಗಳನ್ನು) ತೊರೆದು ಜೀವಕ್ಕೆ ಬಂದಿದ್ದೇವೆ ಎಂಬುದು ನಮಗೆ ಗೊತ್ತಿದೆ. ಕ್ರಿಸ್ತನಲ್ಲಿ ನಮ್ಮ ಸಹೋದರ ಸಹೋದರಿಯರನ್ನು ನಾವು ಪ್ರೀತಿಸುತ್ತಿರುವುದರಿಂದಲೇ ಇದನ್ನು ತಿಳಿದುಕೊಂಡಿದ್ದೇನೆ. ಪ್ರೀತಿಸದಿರುವ ವ್ಯಕ್ತಿಯು ಇನ್ನೂ ಮರಣದಲ್ಲಿದ್ದಾನೆ.


ಅವರೆಲ್ಲರೂ, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಿದರು. ಯೇಸು ಅವರಿಗೆ, “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ” ಎಂದನು.


ಯೇಸು, “ಹೌದು, ನಾನೇ ದೇವರ ಮಗನು. ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀನು ಕಾಣುವೆ” ಎಂದು ಉತ್ತರಿಸಿದನು.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.


“ನಾನು ಸತ್ಯವನ್ನು ಹೇಳುತ್ತೇನೆ. ಆದರೆ ನೀವು ನನ್ನನ್ನು ನಂಬುವುದಿಲ್ಲ.


ನನ್ನಲ್ಲಿ ಪಾಪವನ್ನು ತೋರಿಸಿಕೊಡುವವನು ನಿಮ್ಮಲ್ಲಿ ಯಾವನಾದರೂ ಇರುವನೇ? ನಾನು ಸತ್ಯವನ್ನು ಹೇಳಿದರೂ ನೀವೇಕೆ ನಂಬುವುದಿಲ್ಲ?


ನಾನು ನಿಮಗೆ ಏಕೆ ಬರೆಯಬೇಕು? ನೀವು ಸತ್ಯವನ್ನು ತಿಳಿದಿಲ್ಲವೆಂದು ನಾನು ಬರೆಯಬೇಕೇ? ಇಲ್ಲ! ನೀವು ಸತ್ಯವನ್ನು ತಿಳಿದಿರುವುದರಿಂದ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಸತ್ಯದಿಂದ ಯಾವ ಸುಳ್ಳೂ ಬರುವುದಿಲ್ಲ ಎಂಬುದು ನಿಮಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು