ಯೋಹಾನ 19:10 - ಪರಿಶುದ್ದ ಬೈಬಲ್10 ಪಿಲಾತನು, “ನೀನು ನನ್ನೊಂದಿಗೆ ಮಾತಾಡುವುದಿಲ್ಲವೇ? ನಿನ್ನನ್ನು ಬಿಡಿಸುವ ಅಧಿಕಾರವೂ ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗಿದೆ ಎಂಬುದು ನಿನಗೆ ತಿಳಿಯದೋ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪಿಲಾತನು, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?” ಎಂದು ಆತನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಪಿಲಾತನು, “ನನ್ನೊಡನೆ ನೀನು ಮಾತನಾಡುವುದಿಲ್ಲವೇ? ನಿನ್ನನ್ನು ಬಿಡುಗಡೆ ಮಾಡುವುದಕ್ಕೂ ನಿನ್ನನ್ನು ಶಿಲುಬೆಗೇರಿಸುವುದಕ್ಕೂ ನನಗೆ ಅಧಿಕಾರವಿದೆ ಎಂಬುದು ನಿನಗೆ ತಿಳಿಯದೋ?’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪಿಲಾತನು - ನನ್ನ ಸಂಗಡಲೂ ನೀನು ಮಾತಾಡುವದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬದು ನಿನಗೆ ಗೊತ್ತಿಲ್ಲವೋ ಎಂದು ಆತನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಪಿಲಾತನು ಯೇಸುವಿಗೆ, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವುದಕ್ಕೂ ನಿನ್ನನ್ನು ಶಿಲುಬೆಗೆ ಹಾಕಿಸುವುದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯದೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಪಿಲಾತಾನ್ ತೆಕಾ, “ತಿಯಾ ಮಾಜಾಕ್ಡೆ ಬೊಲಿನಿ ಮಾಕಾ ತುಕಾ ಸೊಡುಕ್ ಅದಿಕಾರ್ ಹಾಯ್, ಅನಿ ಕುರ್ಸಾರ್ ಮಾರುಕ್ಬಿ ಅದಿಕಾರ್ ಹಾಯ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.