ಯೋಹಾನ 19:11 - ಪರಿಶುದ್ದ ಬೈಬಲ್11 ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆಕಾ ಜೆಜುನ್, “ತುಕಾ ಮಾಜೆ ವರ್ತಿ ಅದಿಕಾರ್ ಹಾಯ್ ಕಶ್ಯಾಕ್ ಮಟ್ಲ್ಯಾರ್, ದೆವಾನ್ ತೊ ಅದಿಕಾರ್ ತುಕಾ ದಿಲ್ಯಾನಾಯ್, ತೆಚೆಸಾಟ್ನಿ ಜೊ ಕೊನ್ ಮಾಕಾ ತುಜ್ಯಾ ಹಾತಿತ್ ಒಪ್ಸುನ್ ದಿಲ್ಯಾನಾಯ್ ತೆಕಾ ಮೊಟೊ ಪಾಪ್ ಲಾಗ್ತಾ”. ಅಧ್ಯಾಯವನ್ನು ನೋಡಿ |
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.