Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:31 - ಪರಿಶುದ್ದ ಬೈಬಲ್‌

31 ಆ ದಿನವು ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷವಾದ ಸಬ್ಬತ್‌ದಿನವಾಗಿತ್ತು. ಸಬ್ಬತ್‌ದಿನದಂದು ದೇಹಗಳು ಶಿಲುಬೆಯ ಮೇಲಿರುವುದು ಯೆಹೂದ್ಯರಿಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಕಾಲುಗಳನ್ನು ಮುರಿದು ಬೇಗನೆ ಸಾಯಿಸಲು ಆಜ್ಞಾಪಿಸಬೇಕೆಂಬುದಾಗಿ ಅವರು ಪಿಲಾತನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆ ಹೊತ್ತು ಸೌರಣೆಯ ದಿವಸವಾಗಿದ್ದದರಿಂದ ಯೆಹೂದ್ಯರು - ಸಬ್ಬತ್‍ದಿನದಲ್ಲಿ ಶವಗಳು ಶಿಲುಬೆಯ ಮೇಲೆ ಇರಬಾರದೆಂದು ಪಿಲಾತನನ್ನು - ಅವರ ಕಾಲುಗಳನ್ನು ಮುರಿಸಿ ಅವರನ್ನು ತೆಗೆಸಿಹಾಕಬೇಕೆಂಬದಾಗಿ ಕೇಳಿಕೊಂಡರು; ಯಾಕಂದರೆ ಆ ಸಬ್ಬತ್‍ದಿನವು ಬಹು ವಿಶೇಷವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದು ಪಸ್ಕಹಬ್ಬದ ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯ ನಾಯಕರು ಪಿಲಾತನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಜುದೆವಾಂಚ್ಯಾ ಅದಿಕಾರ್‍ಯಾನಿ ಕುರ್ಸಾರ್ ಮಾರಲ್ಲ್ಯಾಂಚೆ ಡೊಕೆ ಮೊಡುನ್ ತೆಂಚಿ ಮಡಿ ಕುರ್ಸಾನಿ ವೈನಾ ಉತ್ರುಕ್ ಪಿಲಾತಾಕ್ನಾ ಪರ್‍ವಾನ್ಗಿ ಘೆಟ್ಲ್ಯಾನಿ. ತೆಚೆಸಾಟ್ನಿ ತೆನಿ ತೊ ದಿಸ್ ಸುಕ್ರಾರ್, ಅನಿ ಸಬ್ಬಾತಾಚಿ ದಿಸಿ ಮಡಿ ಕುರ್ಸಾ ವರ್ತಿ ಥವ್ತಲೊ ಮನ್ ತೆಂಕಾ ನತ್ತೊ, ಹಿ ಪರ್‍ವಾನ್ಗಿ ಮಾಗುನ್ ಘೆಟಲ್ಲ್ಯಾನಿ, ಅನಿ ಹ್ಯೊ ಸಬ್ಬಾತ್‍ ತರ್ ಲೈ ವಿಶೆಸ್ ರಿತಿಚೊ ಪವಿತ್ರ್ ಸಬ್ಬಾತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:31
12 ತಿಳಿವುಗಳ ಹೋಲಿಕೆ  

ಅಂದು ಪಸ್ಕಹಬ್ಬದ ಸಿದ್ಧತೆಯ ದಿನ ಮತ್ತು ಆಗಲೇ ಮಧ್ಯಾಹ್ನವಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ರಾಜನು!” ಎಂದು ಹೇಳಿದನು.


ಅದು ಸಮೀಪವಾಗಿದ್ದುದರಿಂದ ಮತ್ತು ಯೆಹೂದ್ಯರು ತಮ್ಮ ಸಬ್ಬತ್ ದಿನವನ್ನು ಆರಂಭಮಾಡಲು ಸಿದ್ಧರಾಗುತ್ತಿದುದರಿಂದ ಅವರು ಯೇಸುವನ್ನು ಆ ಸಮಾಧಿಯಲ್ಲಿಟ್ಟರು.


ಆಗ ಕತ್ತಲಾಗತೊಡಗಿತ್ತು. ಅಂದು ಸಿದ್ಧತೆಯ ದಿನವಾಗಿದ್ದರಿಂದ (ಅಂದರೆ ಸಬ್ಬತ್ತಿನ ಹಿಂದಿನ ದಿನ),


ಯೆಹೋಶುವನು “ಆಯಿ”ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಆ ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲೇ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಬಳಿಕ, ಯೇಸುವನ್ನು ಕರೆದುಕೊಂಡು ಹೋಗಿ, ಕೊರಡೆಯಿಂದ ಹೊಡೆಯಬೇಕೆಂದು ಪಿಲಾತನು ಆಜ್ಞಾಪಿಸಿದನು.


ನೀವು ನನ್ನ ಜನರ ದೇಹದಿಂದ ಚರ್ಮ ತೆಗೆದು ಎಲುಬುಗಳನ್ನು ತುಂಡುಮಾಡಿ ಅವರನ್ನು ನಾಶಮಾಡುತ್ತೀರಿ. ತಪ್ಪಲೆಯೊಳಗೆ ಬೇಯಿಸಲು ಮಾಂಸ ತುಂಡುಮಾಡಿ ಹಾಕುವಂತೆ ನೀವು ಅವರ ಎಲುಬುಗಳನ್ನು ತುಂಡುಮಾಡುತ್ತೀರಿ.


ಶಿಷ್ಟನು ತನ್ನ ಪಶುಗಳನ್ನು ನೋಡಿಕೊಳ್ಳುತ್ತಾನೆ. ಆದರೆ ದುಷ್ಟನ ವಾತ್ಸಲ್ಯವು ಕ್ರೂರವಾಗಿದೆ.


ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು.


ಶುಕ್ರವಾರ ಮುಗಿದ ಮೇಲೆ ಮಹಾಯಾಜಕರು ಮತ್ತು ಫರಿಸಾಯರು ಪಿಲಾತನ ಬಳಿಗೆ ಹೋಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು