Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:34 - ಪರಿಶುದ್ದ ಬೈಬಲ್‌

34 ಆದರೆ ಸೈನಿಕರಲ್ಲಿ ಒಬ್ಬನು ತನ್ನ ಈಟಿಯಿಂದ ಯೇಸುವಿನ ಪಕ್ಕೆಗೆ ತಿವಿದನು. ಪಕ್ಕೆಯಿಂದ ರಕ್ತ ಮತ್ತು ನೀರು ಹೊರಗೆ ಹರಿದುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದರೂ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ತಿವಿದ ಕೂಡಲೆ ರಕ್ತವೂ ನೀರೂ ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಯೇಸುವಿನ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಹೊರಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಎಕ್ ಸೈನಿಕಾನ್ ಕಶೆ ಕಾಯ್ಕಿ ಅಪ್ನಾಚ್ಯಾ ಬರ್ಚಿನಿ ಜೆಜುಚ್ಯಾ ಪಕ್ಡಿತ್ ಟೊಪ್ಲ್ಯಾನ್. ತನ್ನಾ ತಾಬೊಡ್ತೊಬ್ ರಗಾತ್ ಅನಿ ಪಾನಿ ಭಾಯ್ರ್ ಪಡ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:34
23 ತಿಳಿವುಗಳ ಹೋಲಿಕೆ  

ಬಂದಾತನೇ ಯೇಸು ಕ್ರಿಸ್ತನು. ಯೇಸು ನೀರಿನಿಂದ ಮಾತ್ರವಲ್ಲದೆ ರಕ್ತದಿಂದ ಬಂದನು. ಇದು ನಿಜವೆಂದು ನಮಗೆ ಆತ್ಮನು ತಿಳಿಸುತ್ತಾನೆ. ಏಕೆಂದರೆ ಆತ್ಮನು ಸತ್ಯಸ್ವರೂಪನಾಗಿದ್ದಾನೆ.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ಆತ್ಮ, ನೀರು ಮತ್ತು ರಕ್ತ. ಈ ಮೂರು ಸಾಕ್ಷಿಗಳ ಅಭಿಪ್ರಾಯವು ಒಂದೇ.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ಕ್ರಿಸ್ತನು ಸಭೆಯನ್ನು ಪರಿಶುದ್ಧಗೊಳಿಸುವುದಕ್ಕಾಗಿ ಪ್ರಾಣಕೊಟ್ಟನು. ಸುವಾರ್ತೆಯನ್ನು ತಿಳಿಸುವುದರ ಮೂಲಕ ಜಲಸ್ನಾನವನ್ನು ಮಾಡಿಸಿ ಆತನು ಸಭೆಯನ್ನು ಶುದ್ಧಗೊಳಿಸಿದನು.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.


ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.


ಹೋತಗಳ ಮತ್ತು ಹೋರಿಗಳ ರಕ್ತವನ್ನೂ ಹಸುಗಳ ಬೂದಿಯನ್ನೂ ಆ ಆರಾಧನೆಯ ಸ್ಥಳದಲ್ಲಿ ಪ್ರವೇಶಿಸುವಷ್ಟು ಶುದ್ಧರಾಗಿಲ್ಲದ ಜನರ ಮೇಲೆ ಚಿಮುಕಿಸಲಾಗುತ್ತಿತ್ತು. ಆ ರಕ್ತ ಮತ್ತು ಬೂದಿ ಜನರ ದೇಹಗಳನ್ನು ಮಾತ್ರ ಶುದ್ಧಿಗೊಳಿಸುತ್ತಿದ್ದವು.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ಶುಕ್ರವಾರ ಮುಗಿದ ಮೇಲೆ ಮಹಾಯಾಜಕರು ಮತ್ತು ಫರಿಸಾಯರು ಪಿಲಾತನ ಬಳಿಗೆ ಹೋಗಿ,


ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ಈಗ ನೀನು ತಡಮಾಡುವುದೇಕೆ? ಎದ್ದೇಳು! ಆತನಲ್ಲಿ ನಂಬಿಕೆಯಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೊ’ ಎಂದು ಹೇಳಿದನು.


ಬಳಿಕ ಅವರು ಯೇಸುವಿನ ಅತಿ ಸಮೀಪಕ್ಕೆ ಬಂದಾಗ ಆತನು ಆಗಲೇ ಸತ್ತುಹೋಗಿರುವುದನ್ನು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.


ಯೇಸು ಹೀಗೆ ಹೇಳಿದ ಮೇಲೆ, ತನ್ನ ಕೈಗಳನ್ನು ಮತ್ತು ಪಕ್ಕೆಯನ್ನು ಅವರಿಗೆ ತೋರಿಸಿದನು. ಪ್ರಭುವನ್ನು ಕಂಡು ಶಿಷ್ಯರಿಗೆ ಬಹು ಸಂತೋಷವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು