Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:36 - ಪರಿಶುದ್ದ ಬೈಬಲ್‌

36 ಪವಿತ್ರ ಗ್ರಂಥದಲ್ಲಿ ಬರೆದಿರುವ, “ಆತನ ಎಲುಬುಗಳಲ್ಲಿ ಒಂದಾದರೂ ಮುರಿಯಲ್ಪಡುವುದಿಲ್ಲ” ಎಂಬ ಮಾತು ಹೀಗೆ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯಾಕಂದರೆ - ಆತನ ಒಂದು ಎಲುಬನ್ನಾದರೂ ಮುರಿಯಕೂಡದು ಎಂದು ಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಏಕೆಂದರೆ, “ಯೇಸುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆಯೇ ಇವೆಲ್ಲಾ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 “ತೆಚೆ ಎಕ್ ಸೈತ್ ಹಡ್ಡ್ ಮೊಡುನ್ ಹೊಯ್ನಾ. ಮನುನ್ ಪವಿತ್ರ್ ಪುಸ್ತಕಾತ್ ಸಾಂಗಟಲ್ಲೆ ಖರೆ ಹೊವ್‍ಸಾಟ್ನಿ ಹೆ ಅಶೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:36
10 ತಿಳಿವುಗಳ ಹೋಲಿಕೆ  

ಆತನು ಅವರ ಎಲುಬುಗಳನ್ನೆಲ್ಲ ಕಾಪಾಡುವನು. ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.


ಅದರಲ್ಲಿ ಯಾವುದನ್ನೂ ಮರುದಿನದವರೆಗೆ ಇಡಬಾರದು. ಅವರು ಅದೆಲ್ಲವನ್ನು ತಿಂದುಬಿಡಬೇಕು. ಆ ಕುರಿಮರಿಯ ಎಲುಬುಗಳನ್ನು ಮುರಿಯಬಾರದು. ಅವರು ಪಸ್ಕಹಬ್ಬದ ವಿಷಯವಾಗಿ ನೇಮಕವಾಗಿರುವ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.


“ಪಸ್ಕಹಬ್ಬದ ಊಟವನ್ನು ಮನೆಯೊಳಗೆ ತಿನ್ನಬೇಕು. ಪಸ್ಕದ ಮಾಂಸವನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಕುರಿಮರಿಯ ಎಲುಬುಗಳಲ್ಲಿ ಯಾವುದನ್ನೂ ಮುರಿಯಬಾರದು.


ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ನನ್ನ ಮೂಳೆಗಳೆಲ್ಲಾ ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.


ಇದಾದ ಮೇಲೆ ಎಲ್ಲವೂ ನೆರವೇರಿತೆಂದು ತಿಳಿದುಕೊಂಡು ಪವಿತ್ರ ಗ್ರಂಥದ ಮಾತನ್ನು ನೆರವೇರಿಸುವುದಕ್ಕಾಗಿ ಆತನು, “ನನಗೆ ದಾಹವಾಗಿದೆ” ಎಂದು ಹೇಳಿದನು.


ಪ್ರವಾದಿಯ ಮೂಲಕ ಪ್ರಭು ತಿಳಿಸಿದ್ದೆಲ್ಲ ನೆರವೇರುವಂತೆ ಇದೆಲ್ಲಾ ನಡೆಯಿತು.


ಯೆಹೋವನೇ, ಹೃದಯಪೂರ್ವಕವಾಗಿ ಹೇಳುವೆ, “ನಿನಗೆ ಸಮಾನರು ಇಲ್ಲವೇ ಇಲ್ಲ. ಬಡವರನ್ನು ಬಲಿಷ್ಠರಿಂದ ತಪ್ಪಿಸಿ ರಕ್ಷಿಸುವಾತನು ನೀನೇ. ಬಲಿಷ್ಠರನ್ನು ಸೂರೆಮಾಡಿ ಬಡವರಿಗೂ ಅಸಹಾಯಕರಿಗೂ ಕೊಡುವಾತನು ನೀನೇ.”


ಆದ್ದರಿಂದ ಸೈನಿಕರು, “ನಾವು ಇದನ್ನು ಹರಿದು ಪಾಲುಮಾಡಬಾರದು. ನಾವು ಚೀಟಿಹಾಕಿ ಇದು ಯಾರಿಗೆ ಬರುತ್ತದೋ ನೋಡೋಣ” ಎಂದು ಮಾತಾಡಿಕೊಂಡು ಹಾಗೆಯೇ ಮಾಡಿದರು. “ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲು ಮಾಡಿಕೊಂಡರು; ನನ್ನ ಅಂಗಿಗಾಗಿ ಚೀಟಿ ಹಾಕಿದರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ಮಾತು ಹೀಗೆ ನೆರವೇರಿತು.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


ಹೀಗೆ ಯೆಹೋವನ ವಾಕ್ಯವು ನೆರವೇರಿತು. ಯೇಹುವಿನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೆ ಇಸ್ರೇಲಿನ ರಾಜರಾಗಿರುತ್ತಾರೆ ಎಂದು ಯೆಹೋವನು ಅವನಿಗೆ ಮೊದಲೇ ತಿಳಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು