Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:41 - ಪರಿಶುದ್ದ ಬೈಬಲ್‌

41 ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳದಲ್ಲೇ ಒಂದು ತೋಟವಿತ್ತು. ಆ ತೋಟದಲ್ಲಿ ಒಂದು ಹೊಸ ಸಮಾಧಿಯಿತ್ತು. ಅದರಲ್ಲಿ ಹಿಂದೆಂದೂ ಯಾರನ್ನೂ ಸಮಾಧಿ ಮಾಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಯೇಸುವನ್ನು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಅದುವರೆಗೆ ಯಾರ ಶವವನ್ನೂ ಇಡದ ಹೊಸ ಸಮಾಧಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು; ಅದರಲ್ಲಿ ಅದುವರೆಗೆ ಯಾರನ್ನೂ ಇಟ್ಟಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೇಸು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಹೊಸ ಸಮಾಧಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಜೆಜುಕ್ ಜಿವಾನಿ ಮಾರಲ್ಲ್ಯಾ ಜಾಗ್ಯಾಚ್ಯಾ ಜಗ್ಗೊಳ್ ಎಕ್ ಮ್ಹಳೊ ಹೊತ್ತೊ. ತ್ಯಾ ಮಳ್ಯಾತ್ ಅಜುನ್ ಪತರ್ ಕೊನಾಕ್ಬಿ ಮಾಟಿ ದಿ ನಸಲ್ಲಿ ಎಕ್ ಸಮಾದಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:41
7 ತಿಳಿವುಗಳ ಹೋಲಿಕೆ  

ಬಳಿಕ ಇವನು ಯೇಸುವಿನ ದೇಹವನ್ನು ಶಿಲುಬೆಯಿಂದ ಇಳಿಸಿ ಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಈ ಸಮಾಧಿಯಲ್ಲಿ ಬೇರೆ ಯಾರನ್ನೂ ಎಂದೂ ಹೂಳಿರಲಿಲ್ಲ.


ಬಂಡೆಯಲ್ಲಿ ತಾನು ತೋಡಿಸಿದ್ದ ಹೊಸ ಸಮಾಧಿಯಲ್ಲಿ ಇಟ್ಟನು. ಸಮಾಧಿಯ ಬಾಗಿಲಿಗೆ ಒಂದು ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.


ಯೇಸು ಆಕೆಯನ್ನು “ಅಮ್ಮಾ ಏಕೆ ಅಳುತ್ತಿರುವೆ? ನೀನು ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಿದನು. ಇವನು ತೋಟವನ್ನು ನೋಡಿಕೊಳ್ಳುವವನಿರಬಹುದೆಂದು ಮರಿಯಳು ಯೋಚಿಸಿಕೊಂಡು ಅವನಿಗೆ, “ಅಯ್ಯಾ, ನೀನು ಯೇಸುವನ್ನು ತೆಗೆದುಕೊಂಡು ಹೋದೆಯಾ? ಆತನನ್ನು ಎಲ್ಲಿಟ್ಟಿರುವೆ, ನನಗೆ ಹೇಳು. ನಾನು ಹೋಗಿ ಆತನನ್ನು ತೆಗೆದು ಕೊಳ್ಳುತ್ತೇನೆ” ಎಂದು ಹೇಳಿದಳು.


ಆ ಸೇವಕನನ್ನು ‘ನೀನಿಲ್ಲಿ ಏನು ಮಾಡುತ್ತಿರುವೆ? ನಿನ್ನ ಕುಟುಂಬದವರಲ್ಲಿ ಯಾರನ್ನಾದರೂ ಇಲ್ಲಿ ಸಮಾಧಿ ಮಾಡಿರುವಿಯಾ? ಇಲ್ಲಿ ಸಮಾಧಿಯನ್ನು ಯಾಕೆ ನಿರ್ಮಿಸಿರುವೆ? ಎಂದು ಕೇಳು.’” ಅದಕ್ಕೆ ಯೆಶಾಯನು, “ಈ ಮನುಷ್ಯನನ್ನು ನೋಡು. ಅವನು ತನ್ನ ಸಮಾಧಿಯನ್ನು ಎತ್ತರವಾದ ಸ್ಥಳದಲ್ಲಿ ಸಿದ್ಧಪಡಿಸುತ್ತಿದ್ದಾನೆ. ಅವನು ಸಮಾಧಿ ಸಿದ್ಧಪಡಿಸಲು ಬಂಡೆಯನ್ನು ಕೊರೆಯುತ್ತಿದ್ದಾನೆ.


ಯೋಷೀಯನ ಸೇವಕರು ಮೆಗಿದ್ದೋವಿನಿಂದ ರಥದಲ್ಲಿ ಯೋಷೀಯನ ದೇಹವನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು. ಅವರು ಯೋಷೀಯನನ್ನು ಅವನ ಸ್ವಂತ ಸ್ಮಶಾನದಲ್ಲಿ ಸಮಾಧಿಮಾಡಿದರು. ನಂತರ ಸಾಮಾನ್ಯ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಕರೆದು, ಅವನನ್ನು ಅಭಿಷೇಕಿಸಿ ಹೊಸ ರಾಜನನ್ನಾಗಿ ಮಾಡಿದರು.


ಅದು ಸಮೀಪವಾಗಿದ್ದುದರಿಂದ ಮತ್ತು ಯೆಹೂದ್ಯರು ತಮ್ಮ ಸಬ್ಬತ್ ದಿನವನ್ನು ಆರಂಭಮಾಡಲು ಸಿದ್ಧರಾಗುತ್ತಿದುದರಿಂದ ಅವರು ಯೇಸುವನ್ನು ಆ ಸಮಾಧಿಯಲ್ಲಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು