Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:7 - ಪರಿಶುದ್ದ ಬೈಬಲ್‌

7 ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೂದ್ಯರು ಅವನಿಗೆ - ನಮಗೆ ಒಂದು ನೇಮ ಉಂಟು, ಆ ನೇಮದ ಪ್ರಕಾರ ಇವನು ಸಾಯತಕ್ಕವನು; ಯಾಕಂದರೆ ಅವನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೂದ್ಯ ನಾಯಕರು ಅವನಿಗೆ, “ನಮಗೆ ಒಂದು ನಿಯಮವಿದೆ, ಆ ನಿಯಮದ ಪ್ರಕಾರ ಅವನು ಸಾಯಲೇಬೇಕು. ಏಕೆಂದರೆ ಅವನು ತನ್ನನ್ನು ದೇವರ ಪುತ್ರನನ್ನಾಗಿ ಮಾಡಿಕೊಂಡಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ತ್ಯಾ ಜುದೆವಾನಿ “ಅಮ್ಕಾ ಎಕ್ ಖಾಯ್ದೊ ಹಾಯ್ ಅನಿ ತ್ಯಾ ಖಾಯ್ದ್ಯಾ ಪರ್‍ಕಾರ್ ಹೆಕಾ ಮರ್‍ನಾಚಿ ಶಿಕ್ಷಾ ಹೊವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಕುಚ್ ದೆವಾಚೊಲೆಕ್ ಮನುನ್ ಮಾನ್ತಾ” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:7
14 ತಿಳಿವುಗಳ ಹೋಲಿಕೆ  

ಯಾವನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣಶಿಕ್ಷೆಯಾಗಬೇಕು.


ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.


ಶಿಲುಬೆಯ ಮುಂದೆ ನಿಂತಿದ್ದ ಸೈನ್ಯದ ಅಧಿಕಾರಿಯು ಯೇಸು ಪ್ರಾಣಬಿಟ್ಟಾಗ ನಡೆದದ್ದನ್ನು ನೋಡಿ, “ಈ ಮನುಷ್ಯನು ನಿಜವಾಗಿಯೂ ದೇವರ ಮಗನು” ಎಂದನು.


“ಒಬ್ಬ ಪ್ರವಾದಿಯು ನಾನು ಹೇಳದ ಸಂಗತಿಯನ್ನು ನಿಮಗೆ ಹೇಳಿದರೂ ಹೇಳಬಹುದು. ದೇವರಿಂದ ಬಂದ ಸಂದೇಶವನ್ನು ನಿಮಗೆ ತಿಳಿಸುತ್ತಿರುವೆನು ಎಂದು ಅವನು ಹೇಳಬಹುದು. ಇಂಥಾ ಸಂದರ್ಭಗಳು ಬಂದಲ್ಲಿ ಆ ಪ್ರವಾದಿಯನ್ನು ಸಾಯಿಸಬೇಕು. ಇಷ್ಟು ಮಾತ್ರವಲ್ಲ ಇತರ ದೇವರುಗಳ ಸಂದೇಶವನ್ನು ಕೊಡುವ ಪ್ರವಾದಿಗಳೂ ಬರಬಹುದು. ಅವರನ್ನೂ ನೀವು ಸಾಯಿಸಬೇಕು.


ಆದರೆ ಆತನು ನಮ್ಮ ಸಂಕಷ್ಟಗಳನ್ನು ತನ್ನ ಮೇಲೆ ಹೊತ್ತುಕೊಂಡನು. ನಮ್ಮ ಬೇನೆಯನ್ನು ಆತನು ಅನುಭವಿಸಿದನು. ದೇವರು ಆತನನ್ನು ಶಿಕ್ಷಿಸಿದ್ದಾನೆ ಎಂದು ನಾವು ನೆನಸಿದೆವು. ಆತನು ಏನೋ ಮಾಡಿದ್ದಕ್ಕಾಗಿ ದೇವರು ಆತನಿಗೆ ಹೊಡೆದನೆಂದು ಭಾವಿಸಿಕೊಂಡೆವು.


ಪಿಲಾತನು ಇದನ್ನು ಕೇಳಿ ಬಹು ಭಯಗೊಂಡು,


ರಾಜ್ಯಪಾಲನಿಗೆ, “ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಇವನು ಜನರಿಗೆ ಉಪದೇಶಿಸುತ್ತಿದ್ದಾನೆ!” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು