Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:24 - ಪರಿಶುದ್ದ ಬೈಬಲ್‌

24 ಯೇಸು ಬಂದಾಗ ದಿದುಮನೆಂಬ ತೋಮನು ಶಿಷ್ಯರೊಂದಿಗೆ ಇರಲಿಲ್ಲ. ಹನ್ನೆರಡು ಮಂದಿ ಶಿಷ್ಯರಲ್ಲಿ ತೋಮನೂ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸು ಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರೊಳಗೆ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಸಂಗಡ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಯೇಸು ಬಂದಾಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮನು ಎನಿಸಿಕೊಂಡ ತೋಮನು ಅವರ ಸಂಗಡ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಬಾರಾ ಜಾನಾ ಶಿಸಾನಿತ್ಲೊ ದಿದಿಮೊಸ್ ಮಟ್ಲ್ಯಾರ್ ಅವ್ಲೊ ಅವ್ಳಿ-ಜವ್ಳಿ ಮನ್ತಲೊ ಥೊಮಸ್ ಜೆಜು ಥೈ ಯೆಲ್ಲ್ಯಾ ತನ್ನಾ ತೆಂಚ್ಯಾ ವಾಂಗ್ಡಾ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:24
9 ತಿಳಿವುಗಳ ಹೋಲಿಕೆ  

ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಹೋಗಿ ಜುದೇಯದಲ್ಲಿ ಸಾಯೋಣ” ಎಂದು ಹೇಳಿದನು.


ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.


ಕೆಲವು ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯಾರೆಂದರೆ, ಸೀಮೋನ್ ಪೇತ್ರ, ದಿದುಮನೆಂಬ ತೋಮ, ಗಲಿಲಾಯಕ್ಕೆ ಸೇರಿದ ಕಾನಾ ಊರಿನವನಾದ ನತಾನಿಯೇಲ, ಜೆಬೆದಾಯನ ಇಬ್ಬರು ಗಂಡುಮಕ್ಕಳು ಮತ್ತು ಇನ್ನಿಬ್ಬರು ಶಿಷ್ಯರು.


ತೋಮನು ಯೇಸುವಿಗೆ, “ಪ್ರಭುವೇ, ನೀನು ಹೋಗುತ್ತಿರುವುದು ಎಲ್ಲಿಗೆಂಬುದೇ ನಮಗೆ ಗೊತ್ತಿಲ್ಲ. ಹೀಗಿರಲು, ಆ ದಾರಿಯನ್ನು ನಾವು ಹೇಗೆ ತಿಳಿದುಕೊಳ್ಳಲಾದೀತು?” ಎಂದನು.


ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,


ಇದು ಸತ್ಯ. ಏಕೆಂದರೆ ಎಲ್ಲಿ ಇಬ್ಬರಾಗಲಿ ಮೂವರಾಗಲಿ ನನ್ನಲ್ಲಿ ನಂಬಿಕೆಯನ್ನಿಟ್ಟು ಒಟ್ಟಾಗಿ ಸೇರಿಬಂದಿರುತ್ತಾರೋ ಅವರ ಮಧ್ಯದಲ್ಲಿ ನಾನಿರುತ್ತೇನೆ.”


ಬಳಿಕ ಯೇಸು, “ನಾನು ಆರಿಸಿಕೊಂಡ ಹನ್ನೆರಡು ಮಂದಿ ನೀವೇ. ಆದರೆ ನಿಮ್ಮಲ್ಲಿರುವ ಒಬ್ಬನು ಸೈತಾನನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟನು.


ಯೇಸು ಸಿಮೋನನ ಮಗನಾದ ಇಸ್ಕರಿಯೋತ ಯೂದನ ಬಗ್ಗೆ ಮಾತಾಡುತ್ತಿದ್ದನು. ಯೂದನು ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾಗಿದ್ದನು. ಆದರೆ ಮುಂದೆ ಯೇಸುವಿಗೆ ದ್ರೋಹ ಮಾಡಿದ ವ್ಯಕ್ತಿ ಇವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು