Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:29 - ಪರಿಶುದ್ದ ಬೈಬಲ್‌

29 ಯೇಸು ತೋಮನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದೆ. ನನ್ನನ್ನು ನೋಡದೆ ನಂಬುವವರು ನಿಜವಾಗಿಯೂ ಧನ್ಯರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೇಸು ಅವನಿಗೆ - ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೇಸು ಅವನಿಗೆ, “ನೀನು ನನ್ನನ್ನು ಕಂಡಿದ್ದರಿಂದ ನಂಬಿದ್ದೀಯಾ? ಕಾಣದೆ ನಂಬಿದವರು ಧನ್ಯರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಜೆಜುನ್ ತೆಕಾ, “ತಿಯಾ ಮಾಕಾ ಬಗಟ್ಲೆ ಮನುನ್ ವಿಶ್ವಾಸ್, ಕರುಕ್ ಲಾಗ್ಲೆ, ಖರೆ ಮಾಕಾ ಬಗಿನಸ್ತಾನಾಚ್ ವಿಶ್ವಾಸ್ ಕರ್‍ತಲ್ಯಾಂಚೆ ಕವ್ಡೆ ಬರೆ ಅಸಿಲ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:29
10 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ನಾವು ಯಾವುದನ್ನು ನೋಡುತ್ತಿದ್ದೇವೋ ಅದರಿಂದ ಜೀವಿಸುತ್ತಿಲ್ಲ. ಆದರೆ ಯಾವುದನ್ನು ನಂಬಿದ್ದೇವೋ ಅದರಿಂದ ಜೀವಿಸುತ್ತಿದ್ದೇವೆ.


ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ.


ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;


ಪ್ರಭುವು ನಿನಗೆ ಹೇಳಿದ್ದು ಸಂಭವಿಸೇ ತೀರುವುದೆಂದು ನೀನು ನಂಬಿ ಧನ್ಯಳಾದೆ” ಎಂದಳು.


ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ನೋಡದ ಹೊರತು ನನ್ನನ್ನು ನಂಬುವುದೇ ಇಲ್ಲ” ಎಂದು ಹೇಳಿದನು.


ಬಳಿಕ ಆ ಮತ್ತೊಬ್ಬ ಶಿಷ್ಯನು ಒಳಗೆ ಹೋದನು. ಸಮಾಧಿಯನ್ನು ಮೊದಲು ತಲುಪಿದವನೇ ಆ ಶಿಷ್ಯನು. ಅವನು ಸಂಭವಿಸಿರುವುದನ್ನು ಕಂಡು ನಂಬಿಕೊಂಡನು.


ಇವರೆಲ್ಲರೂ ತಮ್ಮ ನಂಬಿಕೆಯ ವಿಷಯದಲ್ಲಿ ಪ್ರಸಿದ್ಧರಾಗಿದ್ದರು. ಆದರೆ ದೇವರ ದೊಡ್ಡ ವಾಗ್ದಾನವನ್ನು ಇವರಲ್ಲಿ ಯಾರೂ ಹೊಂದಿಕೊಳ್ಳಲಿಲ್ಲ.


ನೀವಾದರೋ ಧನ್ಯರು. ನಿಮಗೆ ಕಾಣುವ ಸಂಗತಿಗಳನ್ನೂ ನಿಮಗೆ ಹೇಳುವ ವಿಷಯಗಳನ್ನೂ ಅರ್ಥಮಾಡಿಕೊಳ್ಳಬಲ್ಲಿರಿ.


ತೋಮನು ಯೇಸುವಿಗೆ, “ನನ್ನ ಪ್ರಭುವೇ, ನನ್ನ ದೇವರೇ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು