Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:15 - ಪರಿಶುದ್ದ ಬೈಬಲ್‌

15 ಅವರು ಊಟಮಾಡಿದ ಮೇಲೆ, ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ಇಲ್ಲಿರುವ ಇವರು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಪೇತ್ರನು, “ಹೌದು ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರೆಲ್ಲರ ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನನ್ನು - ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಮರಿಗಳನ್ನು ಮೇಯಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಉಪಹಾರ ಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ, “ಯೋಹಾನನ ಮಗ ಸೀಮೋನನೇ, ನೀನು ಇವರಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಯೇಸುವಿಗೆ, “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ,” ಎಂದನು. ಅದಕ್ಕೆ ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆಂಚೆ ಖಾವ್ನ್ ಹೊಲ್ಲ್ಯಾ ತನ್ನಾ ಜೆಜುನ್ ಸಿಮಾವ್ ಪೆದ್ರುಕ್, “ಸಿಮಾವ್ ಜುವಾಂವಾಚ್ಯಾ ಲೆಕಾ ತಿಯಾ ಸಗ್ಳ್ಯಾಚ್ಯಾನ್ಕಿ ಜಾಸ್ತಿ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ತನ್ನಾ ಪೆದ್ರುನ್ “ಹೊಯ್ ಧನಿಯಾ, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾಚ್ ಗೊತ್ತ್ ಹಾಯ್‍” ಮನುನ್ ಜಬಾಬ್ ದಿಲ್ಯಾನ್. ಜೆಜುನ್ ತೆಕಾ, “ಮಾಜ್ಯಾ ಬೊಕ್ಡಾಕ್ನಿ ಚಾರ್‍ವು” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:15
49 ತಿಳಿವುಗಳ ಹೋಲಿಕೆ  

ಆದ್ದರಿಂದ ನಂಬಿಕೆಯಲ್ಲಿ ಬಲಹೀನವಾಗಿರುವವರ ಬಲಹೀನತೆಗಳನ್ನು ನಾವು ಸಹಿಸಿಕೊಳ್ಳಬೇಕು. ನಾವು ಕೇವಲ ನಮ್ಮ ಹಿತವನ್ನು ಮಾತ್ರ ನೋಡಿಕೊಳ್ಳಬಾರದು.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.


ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.


ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವ ನಿಮ್ಮೆಲ್ಲರ ಮೇಲೆ ದೇವರ ಕೃಪೆಯಿರಲಿ.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


ಯೇಸುವೇ ಕ್ರಿಸ್ತನೆಂದು ನಂಬುವವರು ದೇವರ ಮಕ್ಕಳಾಗಿದ್ದಾರೆ. ತಂದೆಯನ್ನು (ದೇವರನ್ನು) ಪ್ರೀತಿಸುವವನು ತಂದೆಯ ಮಕ್ಕಳನ್ನೂ ಪ್ರೀತಿಸುತ್ತಾನೆ.


ಹೌದು, ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. ನೀವು ನನ್ನನ್ನು ಪ್ರೀತಿಸಿದರಿಂದ ಮತ್ತು ನಾನು ದೇವರಿಂದ ಬಂದೆನೆಂದು ನೀವು ನಂಬುವುದರಿಂದ ಆತನು ನಿಮ್ಮನ್ನು ಪ್ರೀತಿಸುತ್ತಾನೆ.


ನಿಮಗೆ ಹೊಸ ಪಾಲಕರನ್ನು ನೇಮಿಸುವೆನು. ಆ ಪಾಲಕರು ನನಗೆ ನಂಬಿಗಸ್ತರಾಗಿರುತ್ತಾರೆ. ಅವರು ಬುದ್ಧಿ ಮತ್ತು ಜ್ಞಾನಗಳಿಂದ ನಿಮಗೆ ಮಾರ್ಗದರ್ಶನ ಮಾಡುತ್ತಾರೆ.


ಆಮೇಲೆ ನಾನು ಅವರಿಗೆ ಒಬ್ಬ ಕುರುಬನನ್ನು ನೇಮಿಸುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಬನಾಗುವನು.


ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯನ್ನು ನಿಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳಿರಿ. ಅವನ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ಅವನೊಂದಿಗೆ ವಾಗ್ವಾದ ಮಾಡಬೇಡಿ.


ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.


ನನ್ನ ಕುರಿಗಳನ್ನು ನೋಡಿಕೊಳ್ಳುವದಕ್ಕೆ ನಾನು ಹೊಸ ಕುರುಬರನ್ನು ನೇಮಿಸುವೆನು. ಆ ಕುರುಬರು ನನ್ನ ಕುರಿಗಳ ಯೋಗಕ್ಷೇಮವನ್ನು ನೋಡಿಕೊಳ್ಳುವರು. ನನ್ನ ಕುರಿಗಳು ಬೆದರುವದಿಲ್ಲ, ಭಯಪಡುವದಿಲ್ಲ. ನನ್ನ ಒಂದು ಕುರಿಯೂ ಕಳೆದುಹೋಗುವದಿಲ್ಲ.” ಇದು ಯೆಹೋವನ ಸಂದೇಶ.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ಹೊಸದಾಗಿ ಹುಟ್ಟಿದ ಕೂಸುಗಳಂತಿರಿ. ನಿಮ್ಮ ಆತ್ಮವನ್ನು ಪೋಷಿಸುವಂಥ ಶುದ್ಧ ಹಾಲನ್ನು (ದೇವರ ವಾಕ್ಯವೆಂಬ) ಬಯಸಿರಿ. ನೀವು ಅದನ್ನು ಕುಡಿಯುವುದರಿಂದ ಬೆಳವಣಿಗೆ ಹೊಂದಿ ರಕ್ಷಿಸಲ್ಪಡುವಿರಿ.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ಯೇಸು ಅವರಿಗೆ, “ಬಂದು ಊಟ ಮಾಡಿ” ಎಂದು ಹೇಳಿದನು. ಶಿಷ್ಯರಲ್ಲಿ ಒಬ್ಬರಾದರೂ, “ನೀನು ಯಾರು?” ಎಂದು ಆತನನ್ನು ಕೇಳಲಿಲ್ಲ. ಆತನು ಪ್ರಭುವೆಂದು ಅವರಿಗೆ ತಿಳಿದಿತ್ತು.


ಯೇಸುವಿನ ಪ್ರೀತಿಯ ಶಿಷ್ಯನು ಪೇತ್ರನಿಗೆ, “ಆ ಮನುಷ್ಯನು ಪ್ರಭುವೇ!” ಎಂದು ಹೇಳಿದನು. ಕೂಡಲೇ ಪೇತ್ರನು ತನ್ನ ಅಂಗಿಯನ್ನು ಹಾಕಿಕೊಂಡು, ನೀರಿಗೆ ಧುಮುಕಿದನು. (ಪೇತ್ರನು ಮೀನು ಹಿಡಿಯುವುದಕ್ಕಾಗಿ ತನ್ನ ಅಂಗಿಯನ್ನು ಬಿಚ್ಚಿಟ್ಟಿದ್ದನು.)


“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ಹೀಗಿರಲಾಗಿ, ಈ ಬಲಹೀನ ಸಹೋದರನು ನಿಮ್ಮ ತಿಳುವಳಿಕೆಯ ದೆಸೆಯಿಂದ ಹಾಳಾದನು. ಕ್ರಿಸ್ತನು ಈ ಸಹೋದರನಿಗೋಸ್ಕರವಾಗಿ ತನ್ನ ಪ್ರಾಣವನ್ನೇ ಕೊಟ್ಟಿದ್ದಾನೆ.


ಯೇಸು ಆ ಯೆಹೂದ್ಯರಿಗೆ, “ದೇವರು ನಿಜವಾಗಿಯೂ ನಿಮ್ಮ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ನಾನು ದೇವರಿಂದ ಬಂದು ಈಗ ಇಲ್ಲಿದ್ದೇನೆ. ನಾನು ಬಂದದ್ದು ನನ್ನ ಸ್ವಂತ ಅಧಿಕಾರದಿಂದಲ್ಲ. ದೇವರೇ ನನ್ನನ್ನು ಕಳುಹಿಸಿದನು.


ಪೇತ್ರನು, “ಉಳಿದ ಶಿಷ್ಯರೆಲ್ಲರು ಭಯಗೊಂಡು ಹಿಂಜರಿದರೂ ನಾನು ಹಿಂಜರಿಯುವುದಿಲ್ಲ” ಎಂದು ಉತ್ತರಿಸಿದನು.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ಆದರೆ ಯಾಕೋಬನು ಅವನಿಗೆ, “ನನ್ನ ಮಕ್ಕಳು ಬಲಹೀನರೆಂದು ನಿನಗೆ ಗೊತ್ತಿದೆ. ನಾನು ನನ್ನ ದನಕುರಿಗಳನ್ನೂ ಅವುಗಳ ಮರಿಗಳನ್ನೂ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು. ಒಂದೇ ದಿನದಲ್ಲಿ ಬಹುದೂರದವರೆಗೆ ಎಡಬಿಡದೆ ನಡೆಸಿಕೊಂಡು ಹೋದರೆ, ಎಲ್ಲಾ ಪಶುಗಳು ಸತ್ತುಹೋಗುತ್ತವೆ.


“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.


“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


ನಾನು ನಿನಗೆ ಇನ್ನೇನು ಹೇಳಲಿ? ನಿನ್ನ ಜೊತೆ ಹೇಗೆ ಮಾತನಾಡುತ್ತಲೇ ಇರಲಿ? ನನ್ನ ಒಡೆಯನಾದ ಯೆಹೋವನೇ, ನಾನು ನಿನ್ನ ಸೇವಕನೆಂಬುದು ನಿನಗೆ ತಿಳಿದಿದೆ.


ಪೇತ್ರನು, “ಪ್ರಭುವೇ, ಈಗ ನಾನು ನಿನ್ನನ್ನು ಹಿಂಬಾಲಿಸಲು ಏಕಾಗದು? ನಿನಗೋಸ್ಕರ ಸಾಯುವುದಕ್ಕೂ ನನಗೆ ಮನಸ್ಸಿದೆ!” ಎಂದು ಹೇಳಿದನು.


ಅವನು ಸೀಮೋನನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಸೀಮೋನನ ಕಡೆಗೆ ನೋಡಿ, “ಯೋಹಾನನ ಮಗನಾದ ನಿನ್ನ ಹೆಸರು ಸೀಮೋನ. ನೀನು ಕೇಫನೆಂದು ಕರೆಸಿಕೊಳ್ಳುವೆ” ಎಂದು ಹೇಳಿದನು. (“ಕೇಫ” ಅಂದರೆ “ಪೇತ್ರ” ಎಂದರ್ಥ).


ಆದರೆ ಪೇತ್ರನು, “ನಾನು ನಿನ್ನೊಂದಿಗೆ ಸತ್ತರೂ ಸರಿ, ನಿನ್ನನ್ನು ನಿರಾಕರಿಸುವುದಿಲ್ಲ” ಅಂದನು. ಉಳಿದ ಶಿಷ್ಯರು ಸಹ ಅದೇ ರೀತಿ ಹೇಳಿದರು.


ಪೇತ್ರನು, “ಉಳಿದ ಶಿಷ್ಯರೆಲ್ಲರೂ ನಿನ್ನ ದೆಸೆಯಿಂದ ತಮ್ಮ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಆದರೆ ನಾನು ಮಾತ್ರ ಹಾಗೆ ಮಾಡುವುದಿಲ್ಲ” ಎಂದು ಉತ್ತರಕೊಟ್ಟನು.


ನಾನು ಹೊರಟುಹೋದ ಮೇಲೆ ಬೇರೆಯವರು ನಿಮ್ಮ ಸಭೆಗೆ ಬರುತ್ತಾರೆಂದು ನನಗೆ ಗೊತ್ತಿದೆ. ಕ್ರೂರವಾದ ತೋಳಗಳಂತಿರುವ ಅವರು ಮಂದೆಯನ್ನು ನಾಶಮಾಡಲು ಪ್ರಯತ್ನಿಸುವರು.


ಅವನು ನನಗೆ ಹೇಳಿದ್ದೇನೆಂದರೆ, “ಆಲಯದ ಈ ಸ್ಥಳದಲ್ಲಿ ಸೇವೆಮಾಡುವ ಜನರು ಸಾಮಾನ್ಯ ಜನರ ಯಜ್ಞದ ಮಾಂಸವನ್ನು ಆ ಜನರಿಗಾಗಿ ಬೇಯಿಸುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು