ಯೋಹಾನ 21:16 - ಪರಿಶುದ್ದ ಬೈಬಲ್16 ಎರಡನೆಯ ಸಾರಿ ಯೇಸು ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಪೇತ್ರನು, “ಹೌದು, ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಕಾಯಿ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆತನು ತಿರಿಗಿ ಎರಡನೆಯ ಸಾರಿ ಅವನನ್ನು - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಗಳನ್ನು ಕಾಯಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೇಸು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಪೇತ್ರನು ಯೇಸುವಿಗೆ, “ಹೌದು ಕರ್ತನೇ, ನಾನು ನಿಮ್ಮ ಮೇಲೆ ಮಮತೆ ಇಟ್ಟಿದ್ದೇನೆಂದು ನೀವೇ ಬಲ್ಲಿರಿ,” ಎಂದನು. ಅದಕ್ಕೆ ಯೇಸು ಅವನಿಗೆ, “ನನ್ನ ಕುರಿಗಳನ್ನು ರಕ್ಷಿಸು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅನಿ ಎಕ್ ಉಲ್ಲೊ ಎಳ್ ಹೊಲ್ಲ್ಯಾ ತನ್ನಾ, ಜೆಜುನ್ ಪೆದ್ರುಕ್, “ಸಿಮಾವ್ ಜುವಾಂವಾಚ್ಯಾ ಲೆಕಾ ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ತನ್ನಾ ತೆನಿ, “ಹೊಯ್, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾ ಗೊತ್ತ್ ಹಾಯ್” ಮನುನ್ ಜಬಾಬ್ ದಿಲ್ಯಾನ್. ಜೆಜುನ್ ತೆಕಾ, “ಮಾಜ್ಯಾ ಬಕ್ರ್ಯಾಕ್ನಿ ಬಗುನ್ ಘೆ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.