Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:18 - ಪರಿಶುದ್ದ ಬೈಬಲ್‌

18 ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನೀನು ಯೌವನಸ್ಥನಾಗಿದ್ದಾಗ, ನಡುಕಟ್ಟಿಕೊಂಡು ನಿನಗೆ ಇಷ್ಟವಾದ ಕಡೆಗೆಲ್ಲಾ ಹೋದೆ. ಆದರೆ ನೀನು ಮುದುಕನಾದಾಗ, ನಿನ್ನ ಕೈಗಳನ್ನು ಚಾಚುವೆ ಮತ್ತು ಬೇರೊಬ್ಬನು ನಿನ್ನ ನಡುಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ನಡೆಸಿಕೊಂಡು ಹೋಗುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯೌವನಸ್ಥನಾಗಿದ್ದಾಗ ನೀನೇ ನಡುವನ್ನು ಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿಕೊಂಡು ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂಡು ಹೋಗುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, “ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟ ಬಂದ ಕಡೆಗೆ ತಿರುಗಾಡುತ್ತಿದ್ದೆ. ಆದರೆ ನೀನು ವೃದ್ಧನಾದಾಗ ನಿನ್ನ ಕೈಗಳನ್ನು ಚಾಚುವೆ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ತುಕಾ ಖರೆ ಹೊತ್ತೆ ಸಾಂಗುಕ್ ಲಾಗ್ಲಾ, ತಿಯಾ ದಾಂಡ್ಗೊ ಹೊತ್ತ್ಯಾ ತನ್ನಾ ತಯಾರ್ ಹೊಯ್ಸ್, ಅನಿ ತುಕಾ ಖೈ ಜಾತಲೆ ಹಾಯ್ ಥೈ ಜಾಯ್ಸ್, ಖರೆ ತಿಯಾ ಮ್ಹಾತಾರೊ ಹೊಲ್ಲ್ಯಾ ತನ್ನಾ ತಿಯಾ ತುಜಿ ಹಾತಾ ವೈರ್ ಕರ್‍ತೆ, ಅನಿ ಕೊನ್ಬಿ ದುಸ್ರೆಚ್ ತುಕಾ ಕಪ್ಡೆ ನೆಸ್ವುತಾತ್ ಅನಿ ತುಕಾ ಮನ್‍ ನಸಲ್ಲ್ಯಾಕ್ಡೆ ಘೆವ್ನ್ ಜಾತಾತ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:18
8 ತಿಳಿವುಗಳ ಹೋಲಿಕೆ  

ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಯೇಸು, “ನಾನು ಹೋಗುವಲ್ಲಿಗೆ ಈಗ ನೀನು ಹಿಂಬಾಲಿಸಿಕೊಂಡು ಬರಲಾರೆ. ಆದರೆ ಮುಂದೆ ನೀನು ಹಿಂಬಾಲಿಸಿಕೊಂಡು ಬರುವೆ” ಎಂದು ಉತ್ತರಕೊಟ್ಟನು.


ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ‘ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು’” ಎಂದು ಹೇಳಿದನು.


ಈ ಗುಡಾರದಲ್ಲಿರುವ ತನಕ ನಮಗೆ ಭಾರವಾದ ಹೊರೆಗಳಿವೆ ಮತ್ತು ನಾವು ನರಳುತ್ತೇವೆ. ಬೆತ್ತಲೆಯಾಗಿರಲು ನಾವು ಇಷ್ಟಪಡದೆ ಪರಲೋಕದ ಮನೆಯನ್ನು ಧರಿಸಿಕೊಳ್ಳಲು ಇಷ್ಟಪಡುತ್ತೇವೆ. ಸತ್ತುಹೋಗುವ ಈ ದೇಹವನ್ನು ಜೀವವು ಪೂರ್ಣವಾಗಿ ಆವರಿಸಿಕೊಳ್ಳುವುದು.


ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


(ದೇವರನ್ನು ಮಹಿಮೆಪಡಿಸುವುದಕ್ಕಾಗಿ ಪೇತ್ರನು ಯಾವ ರೀತಿ ಸಾಯುತ್ತಾನೆ ಎಂಬುದನ್ನು ಸೂಚಿಸಲು ಯೇಸು ಹೀಗೆ ಹೇಳಿದನು.) ಬಳಿಕ ಯೇಸು ಪೇತ್ರನಿಗೆ, “ನನ್ನನ್ನು ಹಿಂಬಾಲಿಸು!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು