ಯೋಹಾನ 21:8 - ಪರಿಶುದ್ದ ಬೈಬಲ್8 ಉಳಿದ ಶಿಷ್ಯರು ದೋಣಿಯಲ್ಲಿ ತೀರಕ್ಕೆ ಹೋದರು. ಅವರು ಬಲೆತುಂಬ ಮೀನುಗಳನ್ನು ದಡಕ್ಕೆ ಎಳೆದುಕೊಂಡು ಹೋದರು. ಅವರು ದಡದಿಂದ ಬಹುದೂರದಲ್ಲೇನೂ ಇರಲಿಲ್ಲ. ಕೇವಲ ಮುನ್ನೂರು ಅಡಿಗಳಷ್ಟು ದೂರದಲ್ಲಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಿಕ್ಕ ಶಿಷ್ಯರು ಮೀನು ತುಂಬಿದ್ದ ಬಲೆಯನ್ನು ಎಳೆಯುತ್ತಾ ಸುಮಾರು ಮುನ್ನೂರು ಅಡಿ ದೂರದಲ್ಲಿ ಇದ್ದ ದಡಕ್ಕೆ ದೋಣಿಯಲ್ಲೇ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದಡವು ದೂರವಾಗಿರದೆ ಹೆಚ್ಚುಕಡಿಮೆ ಇನ್ನೂರು ಮೊಳದಲ್ಲಿದ್ದರಿಂದ ಉಳಿದ ಶಿಷ್ಯರು ಮೀನು ತುಂಬಿದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಉಳಿದ ಶಿಷ್ಯರು ಮೀನುಗಳಿದ್ದ ಬಲೆಯನ್ನು ಎಳೆಯುತ್ತಾ ಆ ದೋಣಿಯಲ್ಲಿ ಬಂದರು. ಏಕೆಂದರೆ ಅವರು ದಡದಿಂದ ಹೆಚ್ಚು ದೂರವಿರಲಿಲ್ಲ. ಸುಮಾರು ತೊಂಬತ್ತು ಮೀಟರ್ ದೂರವಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಹುರಲ್ಲಿ ಶಿಸಾ ಮಾಸೊಳ್ಯಾನಿ ಭರಲ್ಲೆ ಜಾಳೆ ವೊಡುಂಗೆತ್ ದಂಡೆಕ್ ಯೆಲಿ, ತೆನಿ ದಂಡೆಕ್ನಾ ಧುರ್ ನತ್ತೆ ಸುಮಾರ್ ತಿನ್ಸೆ ಪುಟ್ ಭುತ್ತುರ್ ಹೊತ್ತೆ. ಅಧ್ಯಾಯವನ್ನು ನೋಡಿ |