Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:14 - ಪರಿಶುದ್ದ ಬೈಬಲ್‌

14 “ಮೋಶೆಯು ಮರಳುಗಾಡಿನಲ್ಲಿ ಸರ್ಪವನ್ನು ಎತ್ತರವಾದ ಕಂಬದ ಮೇಲಿಟ್ಟನು. ಅಂತೆಯೇ ಮನುಷ್ಯಕುಮಾರನನ್ನು ಸಹ ಎತ್ತರವಾದ ಕಂಬದ ಮೇಲಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ [ಜನರು ನೋಡಿ ಜೀವದಿಂದುಳಿಯಬೇಕೆಂದು] ಮೋಶೆಯು ಅಡವಿಯಲ್ಲಿ ಆ ಸರ್ಪವನ್ನು ಎತ್ತರದಲ್ಲಿಟ್ಟ ಹಾಗೆಯೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಮೇಲೆ ಎತ್ತಿದ ಹಾಗೆಯೇ ಮನುಷ್ಯಪುತ್ರನಾದ ನನ್ನನ್ನು ಸಹ ಮೇಲಕ್ಕೆ ಏರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕಶೆ ಮೊಯ್ಜೆನ್ ಡಂಗ್ಳಿತ್ ಪಿತ್ಳಿಚೊ ಸಾಪ್ ಕರುನ್ ಎಕ್ ಖಾಂಬ್ಯಾವರ್ತಿ ವೈರ್ ಕರುನ್‍ ಲಾವಲ್ಲ್ಯಾನ್, ತಸೆಚ್ ಮಾನ್ಸಾಚ್ಯಾ ಲೆಕಾಕ್‍ಬಿ ವೈರ್ ಉಕ್ಲುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:14
16 ತಿಳಿವುಗಳ ಹೋಲಿಕೆ  

ಆದ್ದರಿಂದ ಆತನು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೇರಿಸುವಿರಿ (ಕೊಲ್ಲುವಿರಿ). ನಾನೇ ಆತನೆಂಬುದು ಆಗ ನಿಮಗೆ ತಿಳಿಯುವುದು. ನಾನು ಈ ಕಾರ್ಯಗಳನ್ನು ನನ್ನ ಸ್ವಂತ ಅಧಿಕಾರದಿಂದ ಮಾಡುತ್ತಿಲ್ಲ ಎಂಬುದನ್ನು ನೀವು ತಿಳಿದುಕೊಳ್ಳುವಿರಿ. ಅಲ್ಲದೆ, ತಂದೆಯು ನನಗೆ ಉಪದೇಶಿಸಿದ ಸಂಗತಿಗಳನ್ನು ಮಾತ್ರ ನಾನು ಹೇಳುತ್ತೇನೆಂಬುದೂ ನಿಮಗೆ ಅರಿವಾಗುವುದು.


ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


ಆದರೆ ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದು ಈ ರೀತಿಯಲ್ಲೇ ಆಗಬೇಕಾಗಿದೆ” ಎಂದು ಹೇಳಿದನು.


ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.


ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.


ನಮ್ಮ ನಾಯಕರು ಮತ್ತು ಮಹಾಯಾಜಕರು ಆತನಿಗೆ ಮರಣದಂಡನೆ ವಿಧಿಸಲು ಒಪ್ಪಿಸಿಕೊಟ್ಟು ಶಿಲುಬೆಗೆ ಜಡಿಸಿದರು.


ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.


ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.


ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.


(ತಾನು ಸಾಯುವ ರೀತಿಯ ಬಗ್ಗೆ ಯೇಸು ಹೇಳಿದ್ದ ಮಾತು ಹೀಗೆ ನಿಜವಾಯಿತು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು