Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:18 - ಪರಿಶುದ್ದ ಬೈಬಲ್‌

18 ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಲೆಕಾಚ್ಯಾ ವರ್ತಿ ವಿಶ್ವಾಸ್, ಕರ್‍ತಲ್ಯಾಂಚಿ ಇಚಾರ್‍ನಿ ಹೊಯ್ನಾ ಜೆ ಕೊನ್ ವಿಶ್ವಾಸ್, ಕರಿನಾತ್ ತೆಂಚಿ ಅದ್ದಿ ಇಚಾರ್‍ನಿ ಕರುನ್ ಹೊಲಾ, ಕಶ್ಯಾಕ್ ಮಟ್ಲ್ಯಾರ್ ತೆನಿ ದೆವಾಚ್ಯಾ ಎಕ್ಲ್ಯಾಚ್ ಲೆಕಾಚ್ಯಾ ವರ್ತಿ ವಿಶ್ವಾಸ್, ಕರುಕ್‍ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:18
19 ತಿಳಿವುಗಳ ಹೋಲಿಕೆ  

ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.


ನಂಬಿಕೆಯಿಟ್ಟು, ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದವನು ಅಪರಾಧಿ ಎಂಬ ನಿರ್ಣಯ ಹೊಂದುವನು.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.


ಯಾವನಲ್ಲಿ ಆ ಮಗನಿರುತ್ತಾನೋ ಅವನಲ್ಲಿ ಆ ಜೀವವಿದೆ. ಆದರೆ ಯಾವನಲ್ಲಿ ದೇವರ ಮಗನು ಇರುವುದಿಲ್ಲವೋ ಅವನಲ್ಲಿ ಆ ಜೀವವಿಲ್ಲ.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.


ದೇವರು ತನ್ನ ಒಬ್ಬನೇ ಮಗನ ಮೂಲಕ ನಮಗೆ ಜೀವವನ್ನು ಕೊಡುವುದಕ್ಕಾಗಿ ಆತನನ್ನು ಈ ಲೋಕಕ್ಕೆ ಕಳುಹಿಸಿದನು. ಹೀಗೆ ದೇವರು ತನ್ನ ಪ್ರೀತಿಯನ್ನು ನಮಗೆ ತೋರಿಸಿದ್ದಾನೆ.


ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನನ್ನು ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆ.


ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.


ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?


ಯಾರ್ಯಾರು ಆತನನ್ನು ಸ್ವೀಕರಿಸಿಕೊಂಡರೋ ಅಂದರೆ ಆತನಲ್ಲಿ ನಂಬಿಕೆ ಇಟ್ಟರೋ ಅವರಿಗೆ ಆತನು ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.


ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ.


ದೇವರ ಆಜ್ಞೆ ಏನೆಂದರೆ ಆತನ ಮಗನಾದ ಯೇಸು ಕ್ರಿಸ್ತನಲ್ಲಿ ನಾವು ನಂಬಿಕೆಯಿಟ್ಟು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು