Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:2 - ಪರಿಶುದ್ದ ಬೈಬಲ್‌

2 ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಎಕ್ ದಿಸ್ ರಾಚ್ಚೆ ನಿಕೊದೆಮ್ ಜೆಜುಕ್ಡೆ ಗೆಲೊ, ಅನಿ ಜೆಜುಕ್, “ರಬ್ಬಿ ತಿಯಾ ದೆವಾನ್ ಧಾಡುನ್ ದಿಲ್ಲೊ ಎಕ್ ಗುರುಜಿ ಮನುನ್ ಅಮ್ಕಾ ಗೊತ್ತ್ ಹಾಯ್, ದೆವ್ ಫಾಟಿರ್ ರ್‍ಹಾಲ್ಯಾ ಶಿವಾಯ್ ಕೊನಾಕ್ಬಿ ತಿಯಾ ಕರ್‍ತೆ ತಸ್ಲಿ ಅಜಾಪಾ ಕರುಕ್ ಹೊಯ್ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:2
30 ತಿಳಿವುಗಳ ಹೋಲಿಕೆ  

“ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.


ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್‌ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು.


ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ.


ಯೇಸು ಹಿಂತಿರುಗಿ ನೋಡಿ, “ನಿಮಗೇನು ಬೇಕು?” ಎಂದು ಕೇಳಿದನು. ಆ ಇಬ್ಬರು, “ರಬ್ಬಿ, ನೀನು ಎಲ್ಲಿ ಇಳಿದುಕೊಂಡಿರುವೆ?” ಎಂದು ಕೇಳಿದರು. (“ರಬ್ಬಿ” ಅಂದರೆ “ಗುರು” ಎಂದರ್ಥ.)


ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.


ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಈ ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು.


ಯೇಸು ಆಕೆಗೆ, “ಮರಿಯಳೇ” ಎಂದನು. ಮರಿಯಳು ಯೇಸುವಿನ ಕಡೆಗೆ ತಿರುಗಿ, ಯೆಹೂದ್ಯರ ಭಾಷೆಯಲ್ಲಿ “ರಬ್ಬೂನಿ” ಎಂದಳು. (ರಬ್ಬೂನಿ ಎಂದರೆ “ಗುರು”.)


ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.


ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.


ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.


ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಕುಟುಂಬದವರಿಗೂ ನಗರ ನಿವಾಸಿಗಳಿಗೂ ಹೆದರಿಕೊಂಡಿದ್ದರಿಂದ ಅವನು ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.


ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.


ನಾನಿನ್ನೂ ಸೆರೆಮನೆಯಲ್ಲಿದ್ದೇನೆ. ಆದರೆ ನನ್ನ ಈ ಸ್ಥಿತಿಯಿಂದ ಅನೇಕ ವಿಶ್ವಾಸಿಗಳು ಪ್ರೋತ್ಸಾಹಿತರಾಗಿ ಕ್ರಿಸ್ತನ ವಿಷಯವಾದ ಸಂದೇಶವನ್ನು ಮತ್ತಷ್ಟು ಧೈರ್ಯದಿಂದ ಜನರಿಗೆ ಹೇಳುತ್ತಿದ್ದಾರೆ.


ಆ ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.


ಆದರೆ ರಾಜನಾದ ಚಿದ್ಕೀಯನು ಯೆರೆಮೀಯನಿಗೆ ರಹಸ್ಯವಾಗಿ, “ಯೆರೆಮೀಯನೇ, ನಮಗೆ ಉಸಿರನ್ನೂ ಜೀವವನ್ನೂ ದಯಪಾಲಿಸಿದ ಯೆಹೋವನ ಆಣೆಯಾಗಿ ಹೇಳುತ್ತೇನೆ, ನಾನು ನಿನ್ನನ್ನು ಕೊಲ್ಲುವುದಿಲ್ಲ. ಕೊಲ್ಲಬಯಸುವ ಅಧಿಕಾರಿಗಳ ಕೈಗೂ ನಿನ್ನನ್ನು ಕೊಡುವದಿಲ್ಲವೆಂದು ನಾನು ಮಾತು ಕೊಡುತ್ತೇನೆ” ಎಂದು ಹೇಳಿದನು.


ಮಾರುಕಟ್ಟೆಗಳಲ್ಲಿ ಜನರು ತಮಗೆ ಮರ್ಯಾದೆ ತೋರಿಸಬೇಕೆಂದು ಆಶಿಸುತ್ತಾರೆ; ಜನರಿಂದ ಉಪದೇಶಕರೆನಿಸಿಕೊಳ್ಳಲು ಇಷ್ಟಪಡುತ್ತಾರೆ.


“ಆದರೆ ನೀವು ಉಪದೇಶಕರೆನಿಸಿಕೊಳ್ಳಬೇಡಿ. ನೀವೆಲ್ಲರೂ ಸಹೋದರಸಹೋದರಿಯರು. ನಿಮಗೆ ಒಬ್ಬನೇ ಉಪದೇಶಕನು.


ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.


ಅಷ್ಟರಲ್ಲಿ ಯೇಸುವಿನ ಶಿಷ್ಯರು, “ಗುರುವೇ, ಊಟಮಾಡು” ಎಂದು ಆತನನ್ನು ಒತ್ತಾಯ ಮಾಡಿದರು.


ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು.


ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಆ ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದುಕೊಳ್ಳುವಿರಿ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು.


ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂದು ನೀವು ನಿಜವಾಗಿಯೂ ನಂಬುವಿರಾ? ನಾನು ನಿಮಗೆ ಹೇಳುವ ಸಂಗತಿಗಳು ನನ್ನಿಂದಲೇ ಬಂದಂಥವುಗಳಲ್ಲ. ತಂದೆಯು ನನ್ನಲ್ಲಿ ವಾಸವಾಗಿದ್ದಾನೆ ಮತ್ತು ಆತನು ತನ್ನ ಕಾರ್ಯವನ್ನು ಮಾಡುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು