Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:25 - ಪರಿಶುದ್ದ ಬೈಬಲ್‌

25 ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಮತ್ತೊಬ್ಬ ಯೆಹೂದ್ಯನಿಗೂ ಶುದ್ಧಾಚಾರದ ಬಗ್ಗೆ ವಾದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಶುದ್ಧಾಚಾರವನ್ನು ಕುರಿತು ಯೊವಾನ್ನನ ಶಿಷ್ಯರಿಗೂ ಯೆಹೂದ್ಯನೊಬ್ಬನಿಗೂ ವಿವಾದ ಎದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಿಚಾರ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೋಹಾನನ ಶಿಷ್ಯರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಿವಾದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಉಲ್ಲಿ ಜುವಾಂವಾಚಿ ಶಿಸಾ ಎಕ್ ಜುದೆವಾಕ್ಡೆ ಧಾರ್ಮಿಕ್ ರಿತಿಚ್ಯಾ ನಿತಳಾಚ್ಯಾ ವಿಶಯಾತ್ ವಾದ್ ಖೆಳುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:25
9 ತಿಳಿವುಗಳ ಹೋಲಿಕೆ  

ಕಲ್ಲಿನಿಂದ ಮಾಡಿದ ಆರು ದೊಡ್ಡ ಬಾನೆಗಳು ಅಲ್ಲಿದ್ದವು. ಯೆಹೂದ್ಯರು ಶುದ್ಧಾಚಾರಗಳಿಗಾಗಿ ಈ ಕಲ್ಲಿನ ಬಾನೆಗಳನ್ನು ಉಪಯೋಗಿಸುತ್ತಿದ್ದರು. ಪ್ರತಿಯೊಂದು ಬಾನೆಯೂ ಸುಮಾರು ನೂರು ಲೀಟರ್‌ಗಳಷ್ಟು ನೀರು ಹಿಡಿಯುತ್ತಿತ್ತು.


ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.


“ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.


ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.


ಈ ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ.


ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


ನೀವು ದೇವರ ಆಜ್ಞೆಗಳಿಗೆ ವಿಧೇಯರಾಗದೆ ಜನರ ಸಂಪ್ರದಾಯಗಳನ್ನು ಅನುಸರಿಸುತ್ತಿರುವಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು